ಸೀನಿಯರ್‌ಗಳಿಂದ 7ನೇ ತರಗತಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ; ಶಾಲಾ ಮಂಡಳಿ ಮಾಡಿದ್ದೇನು ಗೊತ್ತಾ?

ಶಾಲೆಯಿಂದ ಹೊರಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ 7 ನೇ ತರಗತಿ ವಿದ್ಯಾರ್ಥಿ ಬಿಸ್ಕೆಟ್ ಕಳವು ಮಾಡಿದ್ದರ ಪರಿಣಾಮವಾಗಿ ಶಾಲಾ ಆಡಳಿತ ಮಂಡಳಿ ಎಲ್ಲಾ ವಿದ್ಯಾರ್ಥಿಗಳಿಗೂ ತರಗತಿಗೆ ಸೇರಿಸದೆ ಶಾಲಾ ಆವರಣದಲ್ಲಿ ಶಿಕ್ಷೆ ನೀಡಿದ್ದರು ಎನ್ನಲಾಗಿದೆ.

Last Updated : Mar 28, 2019, 04:55 PM IST
ಸೀನಿಯರ್‌ಗಳಿಂದ 7ನೇ ತರಗತಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ; ಶಾಲಾ ಮಂಡಳಿ ಮಾಡಿದ್ದೇನು ಗೊತ್ತಾ? title=

ಡೆಹರಾಡೂನ್: ಏಳನೇ ತರಗತಿ ವಿದ್ಯಾರ್ಥಿ ಮೇಲೆ ಹಿರಿಯ ವಿದ್ಯಾರ್ಥಿಗಳು ಮಾರಣಾಂತಿಕ ಹಳೆಲ್ ನಡೆಸಿದ ಪರಿಣಾಮ ಆತ ಸಾವನ್ನಪ್ಪಿದ ಘಟನೆ ಡೆಹರಾಡೂನ್ ನ ವಸತಿ ಶಾಲೆಯೊಂದರಲ್ಲಿ ನಡೆದಿದೆ. ಬಳಿಕ ಈ ಪ್ರಕರಣವನ್ನು ಮುಚ್ಚಿ ಹಾಕಲು ಆಡಳಿತ ಮಂಡಳಿಯು ವಿದ್ಯಾರ್ಥಿಯ ಶವವನ್ನು ಶಾಲೆಯ ಆವರಣದಲ್ಲಿಯೇ ಹೂತು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾರ್ಚ್ 10ರಂದು ಈ ಘಟನೆ ನಡೆದಿದ್ದು, ಹಾಪುರದಲ್ಲಿರುವ ಮೃತ ವಿದ್ಯಾರ್ಥಿಯ ಪೋಷಕರಿಗೆ ವಿಚಾರ ತಿಳಿಸಲಾಗಿದೆ ಎಂದನು ಡೆಹರಾಡೂನ್ ಎಸ್ಎಸ್ಪಿ ನಿವೇದಿತಾ ಕುಕ್ರೆಟ್ ಹೇಳಿದ್ದಾರೆ. 

ಶಾಲೆಯಿಂದ ಹೊರಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ 7 ನೇ ತರಗತಿ ವಿದ್ಯಾರ್ಥಿ ಬಿಸ್ಕೆಟ್ ಕಳವು ಮಾಡಿದ್ದರ ಪರಿಣಾಮವಾಗಿ ಶಾಲಾ ಆಡಳಿತ ಮಂಡಳಿ ಎಲ್ಲಾ ವಿದ್ಯಾರ್ಥಿಗಳಿಗೂ ತರಗತಿಗೆ ಸೇರಿಸದೆ ಶಾಲಾ ಆವರಣದಲ್ಲಿ ಶಿಕ್ಷೆ ನೀಡಿದ್ದರು ಎನ್ನಲಾಗಿದೆ. ಇದರಿಂದ ಕೋಪಗೊಂಡ ಶಾಲೆಯ ಇತರ ವಿದ್ಯಾರ್ಥಿಗಳು ಆತನ ಮೇಲೆ ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್'ನಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ವಿದ್ಯಾರ್ಥಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಬಳಿಕ ಈ ಪ್ರಕರಣವನ್ನು ಪೊಲೀಸರಿಗೆ ತಿಳಿಸದ ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಯ ಶವವನ್ನು ಶಾಲೆಯ ಆವರಣದಲ್ಲಿಯೇ ಹೂತು ಹಾಕಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮ್ಯಾನೇಜರ್, ವಾರ್ಡನ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡ್ ಮಕ್ಕಳ ಹಕ್ಕು ರಕ್ಷಣಾ ಆಯೋಗ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.

Trending News