ನಾಳೆ ಸರ್ಕಾರ ಬೀಳೋದು ಖಚಿತ, ಸಿಎಂ ರಾಜೀನಾಮೆ ನೀಡಲೇಬೇಕು: ಬಿ.ಎಸ್.ಯಡಿಯೂರಪ್ಪ

 ಸಿಎಂ ಕುಮಾರಸ್ವಾಮಿ ಅವರು ನಾಳೆ ವಿಶ್ವಾಸ ಮತಯಾಚನೆಯಲ್ಲಿ ಅಲ್ಪಮತ ಪಡೆದು ಸರ್ಕಾರ ಬೀಳೋದು ಖಚಿತ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Last Updated : Jul 17, 2019, 12:12 PM IST
ನಾಳೆ ಸರ್ಕಾರ ಬೀಳೋದು ಖಚಿತ, ಸಿಎಂ ರಾಜೀನಾಮೆ ನೀಡಲೇಬೇಕು: ಬಿ.ಎಸ್.ಯಡಿಯೂರಪ್ಪ title=
Pic Courtesy: ANI

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ಅವರೇ ನಿರ್ಧಾರ ಕೈಗೊಳ್ಳಬೇಕು ಎಂದು ಮಧ್ಯಂತರ ತೀರ್ಪು ನೀಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, "ಇದು ಪ್ರಜಾಪ್ರಭುತ್ವದ ಗೆಲುವು. ಸ್ಪೀಕರ್ ಅವರು ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಬೇಗ ನಿರ್ಧಾರ ಕೈಗೊಂಡು ತೀರ್ಪನ್ನು ಸುಪ್ರೀಂ ಕೋರ್ಟಿಗೆ ತಿಳಿಸಬೇಕು ಎಂದು ಹೇಳಲಾಗಿದೆ. ಅಲ್ಲದೆ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒತ್ತಡ ಹೇರುವ ಹಾಗಿಲ್ಲ ಎಂದೂ ಸಹ ಹೇಳಲಾಗಿದೆ. ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ನಾಳೆ ವಿಶ್ವಾಸ ಮತಯಾಚನೆಯಲ್ಲಿ ಅಲ್ಪಮತ ಪಡೆದು ಸರ್ಕಾರ ಬೀಳೋದು ಖಚಿತ" ಎಂದು ಹೇಳಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಬುಧವಾರ ಬೆಳಗ್ಗೆ ಮಹತ್ವದ ಮಧ್ಯಂತರ ತೀರ್ಪನ್ನು ಪ್ರಕಟಿಸಿದ್ದು, ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧರಿಸಲಿ. ಅನರ್ಹತೆಯ ಬಗ್ಗೆಯೂ ಸ್ಪೀಕರ್ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿದೆ. 

Trending News