TN CM Stalin : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಅವರ 'ಸನಾತನ ಧರ್ಮ' ಹೇಳಿಕೆಯು ರಾಷ್ಟ್ರದಾದ್ಯಂತ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ತಮ್ಮ ಪುತ್ರನನ್ನು ಬೆಂಬಲಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಉದಯನಿಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಇತರ ಸಚಿವರು ಪ್ರತಿಕ್ರಿಯಿಸಿದ ರೀತಿಯ ಕುರಿತು ಸಿಎಂ ಸ್ಟಾಲಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನನ್ನ ಮಗ ಎಲ್ಲಿಯೂ‘ಜನಾಂಗೀಯ ಹತ್ಯೆ’ ಎಂಬ ಪದವನ್ನು ತಮಿಳು ಅಥವಾ ಇಂಗ್ಲಿಷ್ನಲ್ಲಿ ಬಳಸಿಲ್ಲ ಎಂದು ಸಿಎಂ ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಉದಯನಿಧಿ ಹೇಳಿಕೆ ತಿರುಚಿದ ಆರೋಪದ ಮೇಲೆ ಬಿಜೆಪಿಯ ಅಮಿತ್ ಮಾಳವೀಯ ವಿರುದ್ಧ ಎಫ್ಐಆರ್
ದಬ್ಬಾಳಿಕೆಯ ತತ್ವಗಳ ವಿರುದ್ಧ ಉದಯನಿಧಿ ಅವರ ನಿಲುವನ್ನು ಸಹಿಸಲಾಗದ ಬಿಜೆಪಿ ಪರ ಶಕ್ತಿಗಳು ಸುಳ್ಳು ಸುದ್ದಿ ಹಬ್ಬಿಸಿ, ಸನಾತನ ಚಿಂತನೆಯುಳ್ಳ ಜನರ ಹತ್ಯೆಗೆ ಉದಯನಿಧಿ ಕರೆ ನೀಡಿದ್ದಾರೆ ಎಂದು ಸ್ಟಾಲಿನ್ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಬಿಜೆಪಿ ಈ ಸುಳ್ಳನ್ನು ಉತ್ತರದ ರಾಜ್ಯಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಿದೆ ಎಂದು ದೂರಿದ್ದಾರೆ.
ಸಚಿವ ಉದಯನಿಧಿ ಸನಾತನ ಧರ್ಮ ಕುರಿತ ತಮ್ಮ ಹೇಳಿಕೆ ಸ್ಪಷ್ಟಪಡಿಸಿದ ನಂತರವೂ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರು ಮತ್ತು ಅನೇಕರು ಸುಳ್ಳನ್ನು ಹಂಚಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ..
ಇದನ್ನೂ ಓದಿ: OMG: ಒಂದೇ ಒಂದು ಬಿಸ್ಕೆಟ್ ಮಿಸ್ ಆಗಿದ್ದಕ್ಕೆ 1 ಲಕ್ಷ ರೂ. ದಂಡ ತೆತ್ತ ಐಟಿಸಿ!
ಅಲ್ಲದೆ, ಇದು ಸನಾತನ ಸಂಸ್ಥೆಗೆ ಆವಾಹನೆ ನೀಡುವ ಮೂಲಕ ಗಮನ ಬೇರೆಡೆ ಸೆಳೆಯುವ ಪ್ರಯತ್ನದಂತೆ ತೋರುತ್ತಿದೆ ಎಂದು ಆರೋಪಿಸಿದರು. ಮಣಿಪುರ ಅಥವಾ ಸಿಎಜಿ ವರದಿಯಲ್ಲಿ 7.50 ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರದ ಬಗ್ಗೆ ಪ್ರಧಾನಿಯಾಗಲಿ ಅಥವಾ ಅವರ ಮಂತ್ರಿಯಾಗಲಿ ಉತ್ತರಿಸಲಿಲ್ಲ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.
ಆದರೆ, ಅವರು ಸನಾತನದ ಮೇಲೆ ಚರ್ಚೆ ಮಾಡಲು ಕ್ಯಾಬಿನೆಟ್ ಸಭೆ ಕರೆದರು. ಈ ನಾಯಕರು ನಿಜವಾಗಿಯೂ ಹಿಂದುಳಿದ ಜಾತಿಗಳು, ಪರಿಶಿಷ್ಟ ಜಾತಿಗಳು, ಬುಡಕಟ್ಟು ಜನರನ್ನು ರಕ್ಷಿಸಲು ಮತ್ತು ಮಹಿಳೆಯರನ್ನು ಮೇಲೆತ್ತಲು ಸಾಧ್ಯವೇ?" ಎಂದು ಸಿಎಂ ಸ್ಟಾಲಿನ್ ಪ್ರಶ್ನಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.