ರಾಮಮಂದಿರ ನಿರ್ಮಾಣಕ್ಕಾಗಿ ಜನತೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಕೇಳಿದ್ದೇನು?

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೇಳಿಕೆಯೊಂದನ್ನು ನೀಡಿದ್ದಾರೆ.

Last Updated : Dec 14, 2019, 09:08 AM IST
ರಾಮಮಂದಿರ ನಿರ್ಮಾಣಕ್ಕಾಗಿ ಜನತೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಕೇಳಿದ್ದೇನು? title=

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮನ ದೇವಾಲಯ ನಿರ್ಮಾಣಕ್ಕಾಗಿ ಪ್ರತಿ ಕುಟುಂಬದಿಂದ 11 ರೂಪಾಯಿ ಮತ್ತು ಒಂದು ಕಲ್ಲು ನೀಡಿ ಎಂಬ ಬೇಡಿಕೆಯಿಂದಾಗಿ ಈ ವಿವಾದ ಉದ್ಭವಿಸಿದೆ. ಮುಖ್ಯಮಂತ್ರಿ ಹುದ್ದೆಯಲ್ಲಿರುವ ಬಿಜೆಪಿ ಮುಖಂಡರು ದೇವಾಲಯದ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಕೇಳಿದ್ದು ಇದೇ ಮೊದಲು.

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ  ಬಿಜೆಪಿ ಅಭ್ಯರ್ಥಿ ನಾಗೇಂದ್ರ ಮಹತೋ ಅವರ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ವಿಷಯ ಪ್ರಸ್ತಾಪಿಸಿದರು. 

ಬಾಗೋದರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಆದಿತ್ಯನಾಥ್ ಮಾತನಾಡುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಪ್ರಯತ್ನದಿಂದ 500 ವರ್ಷಗಳ ಹಳೆಯ ವಿವಾದವನ್ನು ಬಗೆಹರಿಸಲಾಗಿದೆ. "ಕಾಂಗ್ರೆಸ್, ಆರ್ಜೆಡಿ, ಸಿಪಿಐ-ಎಂಎಲ್ ಮತ್ತು ಇತರ ಕೆಲವು ಪಕ್ಷಗಳು ದೀರ್ಘಕಾಲದ ವಿವಾದಕ್ಕೆ ಪರಿಹಾರವನ್ನು ಬಯಸುವುದಿಲ್ಲ" ಎಂದು ಅವರು ಇದೇ ಸಂದರ್ಭದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಿದರು.

ಇದೇ ಸಂದರ್ಭದಲ್ಲಿ "ಶೀಘ್ರದಲ್ಲೇ ಅಯೋಧ್ಯೆಯಲ್ಲಿ ಭವ್ಯವಾದ ರಾಮನ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದ ಯೋಗಿ ಆದಿತ್ಯನಾಥ್, ಇದಕ್ಕಾಗಿ ಪ್ರತಿ ಕುಟುಂಬವು 11 ರೂಪಾಯಿ ಮತ್ತು ರಾಮ್ ದೇವಸ್ಥಾನಕ್ಕೆ ಒಂದು ಕಲ್ಲು ನೀಡಬೇಕು" ಎಂದು ಹೇಳಿದರು.

ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, "ನಾನು ರಾಮನ ರಾಜ್ಯದಿಂದ ಬಂದಿದ್ದೇನೆ ಮತ್ತು ಅವರ ಆಡಳಿತ ವ್ಯವಸ್ಥೆಯನ್ನು 'ರಾಮರಾಜ್ಯ' ಎಂದು ಕರೆಯಲಾಗುತ್ತದೆ, ಈ ನೀತಿಗಳು ಬಡವರು, ಯುವಕರು, ಮಹಿಳೆಯರು ಮತ್ತು ಸಮಾಜದ ಪ್ರತಿಯೊಂದು ವಿಭಾಗವನ್ನು ಭೇದವಿಲ್ಲದೆ ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆ. ಅದೇ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ" ಎಂದು ತಿಳಿಸಿದರು.

ಪೌರತ್ವ ಕಾನೂನಿನ ಬಗ್ಗೆ ಕಾಂಗ್ರೆಸ್ ಮೇಲೆ ವಾಗ್ಧಾಳಿ ನಡೆಸಿದ ಯೋಗಿ ಆದಿತ್ಯನಾಥ್, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಚಿತ್ರಹಿಂಸೆಗೊಳಗಾದ ಹಿಂದೂಗಳು, ಸಿಖ್ಖರು, ಬೌದ್ಧರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿ ಅಲ್ಪಸಂಖ್ಯಾತರು ನಿರಾಶ್ರಿತರಂತೆ ಜೀವನ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅಂತಹವರಿಗೆ ಪೌರತ್ವ ನೀಡಲು ಪ್ರಯತ್ನಿಸುತ್ತಿರುವ ಸಮಯದಲ್ಲಿ ಕಾಂಗ್ರೆಸ್, ಆರ್‌ಜೆಡಿ, ಸಿಪಿಐ-ಎಂಎಲ್ ಮುಂತಾದ ಪಕ್ಷಗಳು ಇದರ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. "ಕಾಂಗ್ರೆಸ್ ಪಾಕಿಸ್ತಾನದವರಂತೆ ಮಾತನಾಡುತ್ತಿದೆ" ಎಂದರು.

ಇದೇ ವೇಳೆ ಕಾಂಗ್ರೆಸ್, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಎಂಬ ಮೂರು ಪಕ್ಷಗಳ ಮೈತ್ರಿ ಒಕ್ಕೂಟದ ಮೇಲೆ ದಾಳಿ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪಕ್ಷಗಳು ಸಮಾಜದ ಬಡವರು, ಯುವಕರು ಮತ್ತು ಇತರ ಜನರಿಗೆ ಸೇವೆ ಸಲ್ಲಿಸದೆ ಅಧಿಕಾರ ಪಡೆಯಲು ಬಯಸುತ್ತಾರೆ ಎಂದು ಆರೋಪಿಸಿದರು.
 

Trending News