ಕೊರೋನಾ ಪರಿಸ್ಥಿತಿ ಎದುರಿಸಲು ಹಣ ನೀಡುವಂತೆ‌ ಕೇಂದ್ರಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಂದ ಒತ್ತಡ

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಹಣ ಬಾರದೆ ಹೆಣಗಾಡುತ್ತಿದ್ದ ರಾಜ್ಯಗಳಿಗೆ ಈಗ ಕೊರೋನಾ ಮಹಾಮಾರಿ ಅಪ್ಪಳಿಸಿ ಕಂಗಾಲುಗೊಳಿಸಿವೆ. ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದರಿಂದ  ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳು ತಿರುಗಿ ಬಿದ್ದಿದ್ದಾರೆ.

Last Updated : Apr 23, 2020, 03:49 PM IST
ಕೊರೋನಾ ಪರಿಸ್ಥಿತಿ ಎದುರಿಸಲು ಹಣ ನೀಡುವಂತೆ‌ ಕೇಂದ್ರಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಂದ ಒತ್ತಡ title=

ನವದೆಹಲಿ: ಕೊರೋನಾ ಕೋವಿಡ್-19 (Covid-19) ಮತ್ತು  ಲಾಕ್‌ಡೌನ್ (Lockdown)   ಪರಿಸ್ಥಿತಿಯನ್ನು ನಿಭಾಯಿಸಲು ಪಡಿಪಾಟಿಲು ಪಡುತ್ತಿರುವ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿವೆ. ಹಣ ಕೊಡದೆ ಸತಾಯಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಹಣ ಬಾರದೆ ಹೆಣಗಾಡುತ್ತಿದ್ದ ರಾಜ್ಯಗಳಿಗೆ ಈಗ ಕೊರೊನಾವೈರಸ್ (Coronavirus)  ಮಹಾಮಾರಿ ಅಪ್ಪಳಿಸಿ ಕಂಗಾಲುಗೊಳಿಸಿವೆ. ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದರಿಂದ  ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳು ತಿರುಗಿ ಬಿದ್ದಿದ್ದಾರೆ.

ಇಂಥ ದುರ್ದಿನಗಳಲೂ ಹಣ ಕೊಡದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ? ಕಾಂಗ್ರೆಸ್ ಪಕ್ಷ ಆಡಳಿತ ಇರುವ ಪಂಜಾಬ್, ರಾಜಸ್ಥಾನ, ಪುದುಚೇರಿ ಮತ್ತು ಛತ್ತೀಸ್​ಗಢ ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇ ಎತ್ತಿದ್ದಾರೆ. ಈ ಬಗ್ಗೆ ಇಂದು ಪತ್ರ ಬರೆದಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಮೂರು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದ್ದಾರೆ.

1) ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಕೂಡಲೇ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಬೇಕು.
2) 3 ತಿಂಗಳವರೆಗೆ ವಿಶೇಷ ಕೋವಿಡ್ ನಿಧಿ ನೀಡಬೇಕು.
3) ಹಣಕಾಸು ಆಯೋಗದ ಶಿಫಾರಸ್ಸನ್ನು ಪರಿಶೀಲಿಸಬೇಕು.

ಪ್ರಧಾನಿಗೆ ಪತ್ರ ಬರೆದಿರುವುದಲ್ಲದೆ ಈ ಮೂರು ಅಂಶಗಳ ಬಗ್ಗೆ ಒತ್ತಡ ಹೇರುವಂತೆ ಮನವಿ ಮಾಡಿ ಎಲ್ಲಾ ರಾಜ್ಯಗಳಿಗೂ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಮೊನ್ನೆ ಛತ್ತೀಸ್ಘಡ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು 30 ಸಾವಿರ ಕೋಟಿ ರೂಪಾಯಿ ಹಣ ನೀಡಬೇಕೆಂದು ಒತ್ತಾಯಿಸಿದ್ದರು. ಆ ಪೈಕಿ 10 ಸಾವಿರ ಕೋಟಿ ರೂಪಾಯಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದರು.

Trending News