ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರದಂದು ಶಾಸಕ ಕೆ ಆರ್ ರಮೇಶ್ ಕುಮಾರ್ ಅವರ ಅತ್ಯಾಚಾರದ ಕುರಿತ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸುತ್ತಾ ಅವುಗಳನ್ನು ಅಸಮರ್ಥನೀಯ ಎಂದು ಕರೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ "ನಾನು ಈ ಮುಂಚೆ ಮಾಡಿರುವ ರಮೇಶ್ ಕುಮಾರ್ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ.ಅವು ಅಸಮರ್ಥನೀಯವಾಗಿವೆ.ಅತ್ಯಾಚಾರ ಒಂದು ಘೋರ ಅಪರಾಧ.ಪೂರ್ಣ ವಿರಾಮ ಹಾಕಿ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: KR Ramesh Kumar: 'ರಾಮಮಂದಿರ ಕಟ್ಟಿದರೆ ಸಾಕು ಎನ್ನುವವರಿಗೆ ದೇಶ ಬಿಟ್ಟಿದ್ದೇವೆ'
'ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಬೇಕು' ಎಂದು ಶಾಸಕ ಕೆ ಆರ್ ರಮೇಶ್ ಕುಮಾರ್ ಗುರುವಾರ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆದಿದೆ. ಶೀಘ್ರದಲ್ಲೇ ವೈರಲ್ ಆದ ವೀಡಿಯೊದಲ್ಲಿ, ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕುಮಾರ್ ಅವರ ಅವಹೇಳನಕಾರಿ ಹೇಳಿಕೆಗಳಿಗೆ ನಗುತ್ತಿರುವುದನ್ನು ಕಾಣಬಹುದು.
I wholeheartedly condemn the statement made earlier today by Sri. K.R.Ramesh Kumar. It is inexplicable how anyone can ever utter such words, they are indefensible. Rape is a heinous crime. Full stop.
— Priyanka Gandhi Vadra (@priyankagandhi) December 17, 2021
ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ರಮೇಶ್ ಕುಮಾರ್ ಅವರು ಕ್ಷಮೆಯಾಚಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ಅತ್ಯಾಚಾರ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಉದ್ದೇಶವು ಕ್ಷುಲ್ಲಕಗೊಳಿಸುವುದು ಅಥವಾ ಘೋರ ಅಪರಾಧವನ್ನು ಹಗುರಗೊಳಿಸುವುದು ಅಲ್ಲ, ಆದರೆ ಅದನ್ನು ತಕ್ಷಣ ಹೇಳಿದ್ದು, ನಾನು ಇನ್ನು ಮುಂದೆ ನನ್ನ ಪದಗಳನ್ನು ಎಚ್ಚರಿಕೆಯಿಂದ ಆರಿಸುತ್ತೇನೆ" ಎಂದು ಅವರು ಕ್ಷಮೆಕೋರಿದ್ದಾರೆ.
ಇದನ್ನೂ ಓದಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ