ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೆಲವು ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು.

Last Updated : Aug 8, 2019, 08:06 PM IST
ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸೂಚನೆ   title=

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೆಲವು ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು.

ಪಕ್ಷದ ಕಾರ್ಯಕರ್ತರಿಗೆ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ರಾಹುಲ್ ಗಾಂಧಿ "ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ, ಲಕ್ಷಾಂತರ ನಾಗರಿಕರು ಪ್ರವಾಹದಲ್ಲಿ ಸಿಲುಕಿದ್ದಿದ್ದಾರೆ ಮತ್ತು ಸ್ಥಳಾಂತರಗೊಂಡಿದ್ದಾರೆ. ಪ್ರವಾಹ ಪೀಡಿತ ರಾಜ್ಯಗಳಲ್ಲಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಗತ್ಯವಿರುವವರಿಗೆ ಸಹಾಯ ಮಾಡಲು ವಿನಂತಿಸಿಕೊಳ್ಳುತ್ತೇನೆ. ಪ್ರವಾಹದ ನೀರು ಶೀಘ್ರದಲ್ಲೇ ಕಡಿಮೆಯಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ  "ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

ಕರ್ನಾಟಕದಲ್ಲಿ ಈಗ ಬಾರಿ ಭೀಕರ ಪ್ರವಾಹ ಎದುರಾಗಿದ್ದು ಅದರಲ್ಲೂ ಬೆಳಗಾವಿ ಜಿಲ್ಲೆಯಂತು ಸಂಪೂರ್ಣ ಜಲಾವೃತಗೊಂಡಿದೆ.ರಾಜ್ಯದಲ್ಲಿ ಈಗ ಪ್ರವಾಹ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತದೆ. ಇನ್ನು ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಪಾರುಗಾಣಿಕಾ ದೋಣಿ ಅಪಘಾತಕ್ಕೀಡಾಗಿ ಒಂಬತ್ತು ಜನರು ಮುಳುಗಿದ್ದಾರೆ. ಕೇರಳದ ನಾಲ್ಕು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'  ಘೋಷಣೆ ಮಾಡಲಾಗಿದೆ.

Trending News