ನವದೆಹಲಿ: ಹರಿಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್, ರೈತರ ಸಾಲ ಮನ್ನಾ ಘೋಷಣೆ ಮೂಲಕ ಮತಗಳನ್ನು ತನ್ನತ್ತ ಸೆಳೆಯಲು ಪ್ಲಾನ್ ಮಾಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ವಿಶೇಷ ಯೋಜನೆಗಳನ್ನು ಘೋಷಿಸುವ ಇರಾದೆ ಹೊಂದಿರುವ ಕಾಂಗ್ರೆಸ್, ಅಕ್ಟೋಬರ್ 11ರಂದು ಚಂಡೀಗಢದ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.
"ಚುನಾವಣಾ ಪ್ರಣಾಳಿಕೆಯಲ್ಲಿ ಎಂಟು ಪ್ರಮುಖ ಘೋಷಣೆಗಳನ್ನು ಪ್ರಕಟಿಸಲಿದ್ದು, ಇವುಗಳಲ್ಲಿ ರೈತರ ಸಲ ಮಾನನಾ ಯೋಜನೆಗೆ ಮೊದಲ ಆದ್ಯತೆ ನೀಡಲಾಗುವುದು. ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಲಾಗಿದೆ" ಎಂದು ಪಕ್ಷದ ಮೂಲಗಳು ಮೂಲಗಳು ಎಎನ್‌ಐಗೆ ತಿಳಿಸಿವೆ.
ಪ್ರಣಾಳಿಕೆಯಲ್ಲಿ ಹಿರಿಯ ನಾಗರಿಕರಿಗೆ ಪಿಂಚಣಿ ಭರವಸೆ, ರಾಜ್ಯ ಸರ್ಕಾರದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ನೀಡುವುದಾಗಿ ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.
ಹರಿಯಾಣದಲ್ಲಿ ನಿರುದ್ಯೋಗದ ಪ್ರಮಾಣವನ್ನು ಕಡಿಮೆ ಮಾಡಲು ಶೇ.50 ರಷ್ಟು ಮೀಸಲಾತಿಯನ್ನು ಹರಿಯಾಣ ಯುವಕರಿಗೆ ನೀಡಲಾಗುವುದು. ಸಣ್ಣ ಉದ್ಯಮಿ ಮತ್ತು ಮಾರಾಟಗಾರರಿಗೆ ಜಿಎಸ್ಟಿ ಸರಳವಾಗಲಿದೆ. ಜನರಿಗೆ ಉತ್ತಮ ರಸ್ತೆಗಳು ಮತ್ತು ಉದ್ಯೋಗವನ್ನು ಒದಗಿಸುವುದು ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ.
90 ಸದಸ್ಯರ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 24 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.