Bihar elections 2020: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

Last Updated : Oct 10, 2020, 07:26 PM IST
Bihar elections 2020: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್  title=
ಸಾಂದರ್ಭಿಕ ಚಿತ್ರ

ನವದೆಹಲಿ: ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ನಿತೀಶ್ ಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ- ಬಿಜೆಪಿ ನಾಯಕ ಸುಶಿಲ್ ಮೋದಿ 

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಮತ್ತು ಪಕ್ಷದ ಯುಪಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಲ್ಲದೆ, ಈ ಪಟ್ಟಿಯಲ್ಲಿ ಪಕ್ಷದ ಮುಖಂಡ ಮತ್ತು ಬಾಲಿವುಡ್ ನಟ ಶತ್ರುಘನ್ ಸಿನ್ಹಾ, ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಮತ್ತು ರಾಜಸ್ಥಾನ್ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಇದ್ದಾರೆ.

Trending News