Sonia Gandhi Tests Positive for COVID-19 : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದೆ. ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಈ ಮಾಹಿತಿ ನೀಡಿದ್ದಾರೆ. ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರವಿದ್ದು, ಕೊರೊನಾ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಅವರು ತಮ್ಮನ್ನು ತಾವೇ ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿ ರಣದೀಪ್ ಸುರ್ಜೆವಾಲಾ, 'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ಒಂದು ವಾರದಲ್ಲಿ ಹಲವು ನಾಯಕರು, ಕಾರ್ಯಕರ್ತರನ್ನು ಭೇಟಿ ಮಾಡಿದ್ದು, ಅವರಲ್ಲಿ ಹಲವರು ಕೋವಿಡ್ ಪಾಸಿಟಿವ್ ಇರುವುದು ಕಂಡುಬಂದಿದೆ. ನಿನ್ನೆ ಸಂಜೆಯಿಂದ, ಸೋನಿಯಾ ಗಾಂಧಿ ಅವರಿಗೆ ಸ್ವಲ್ಪ ಜ್ವರ ಮತ್ತು ಕೋವಿಡ್ ಲಕ್ಷಣಗಳು ಕಂಡುಬಂದಿವೆ. ಇಂದು ಕೋವಿಡ್ ಟೆಸ್ಟ್ ಮಾಡಿದಾಗ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇದನ್ನೂ ಓದಿ : ಮೋದಿ ನೇತೃತ್ವದ ಭಗೀರಥ ಕಾರ್ಯದಲ್ಲಿ ಯೋಧನಾಗಿ ಕೆಲಸ ಮಾಡುವೆ: ಹಾರ್ದಿಕ್ ಪಟೇಲ್
ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಳ!
ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,712 ಹೊಸ ಪ್ರಕರಣಗಳು ವರದಿಯಾಗಿದ್ದು, ಬುಧವಾರ 2,745 ಪ್ರಕರಣಳಿದ್ದವು.
ಕೇಂದ್ರ ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಐದು ರೋಗಿಗಳು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ, ಇದರಿಂದಾಗಿ ಸಾವಿನ ಸಂಖ್ಯೆ 5,24,641 ಕ್ಕೆ ಏರಿದೆ. 2,584 ರೋಗಿಗಳು ಕರೋನಾದಿಂದ ಪಾರಾಗಿದ್ದಾರೆ. ಇದೀಗ ಕೋವಿಡ್ ಸೋಂಕಿತರ ಸಂಖ್ಯೆ 4,26,20,394ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.98.74 ರಷ್ಟಿದೆ.
ದೈನಂದಿನ ಪಾಸಿಟಿವ್ ದರ ಶೇ.0.84 ರಷ್ಟು ಹೆಚ್ಚಳವಾಗಿದೆ, ಆದರೆ ವೀಕ್ಲಿ ಪಾಸಿಟಿವ್ ರೇಟ್ ಶೇಕಡಾ 0.67 ರಷ್ಟಿದೆ. ಇಂದು ಬೆಳಗ್ಗಿನ ವರೆಗೆ, ದೇಶದಲ್ಲಿ ಕೋವಿಡ್ 19 ವ್ಯಾಕ್ಸಿನೇಷನ್ ಕವರೇಜ್ 193.70 ಕೋಟಿಗೂ ಹೆಚ್ಚಳವಾಗಿದೆ.
ಇದನ್ನೂ ಓದಿ : ಕೊರೊನಾ 4ನೇ ಅಲೆ ಭೀತಿ: ದೇಶದಲ್ಲಿ ಒಂದೇ ದಿನ 3,712 ಹೊಸ ಪ್ರಕರಣ ದಾಖಲು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ