ಸಂವಿಧಾನ ರಚನೆಯಾಗಿ 75 ವರ್ಷ: ಸಮಾಜ ಕಲ್ಯಾಣ ಇಲಾಖೆಯಿಂದ ಫ್ಲ್ಯಾಷ್‌ಮಾಬ್‌ ನೃತ್ಯದ ಮೂಲಕ ಸಂವಿಧಾನ ಜಾಗೃತಿ ಜಾಥಾ!

Constitution awareness rally: ಸಂವಿಧಾನ ರಚನೆಯಾಗಿ 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕೈಗೊಂಡಿದೆ. 

Written by - Savita M B | Last Updated : Feb 25, 2024, 05:26 PM IST
  • ಸಂವಿಧಾನ ರಚನೆಯಾಗಿ 75 ವರ್ಷ ಪೂರೈಸಿದ ಹಿನ್ನೆಲೆ
  • ಸಮಾಜ ಕಲ್ಯಾಣ ವತಿಯಿಂದ ರಾಜ್ಯದ ವಿವಿಧೆಡೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
  • ಫ್ಲ್ಯಾಷ್‌ಮಾಬ್‌ ನೃತ್ಯದ ಮೂಲಕ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ರಚನೆಯಾಗಿ 75 ವರ್ಷ: ಸಮಾಜ ಕಲ್ಯಾಣ ಇಲಾಖೆಯಿಂದ ಫ್ಲ್ಯಾಷ್‌ಮಾಬ್‌ ನೃತ್ಯದ ಮೂಲಕ ಸಂವಿಧಾನ ಜಾಗೃತಿ ಜಾಥಾ! title=

ಬೆಂಗಳೂರು: ಭಾರತ ಸಂವಿಧಾನದ ಮಹತ್ವ, ಸಂವಿಧಾನವು ನೀಡಿರುವ ಹಕ್ಕು, ಸ್ವಾತಂತ್ರ್ಯಗಳು, ಅಧಿಕಾರಗಳು ಮತ್ತು ಸಂವಿಧಾನದಿಂದಲೇ ಭಾರತದ ಮತ್ತು ರಾಜ್ಯದ ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕತಿಕ, ಶೈಕ್ಷಣಿಕ ಮತ್ತು ಸರ್ವಾಂಗೀಣ ಅಭಿವೃದ್ಧಿ ಎಂಬ ಸಂದೇಶವನ್ನು ಎಲ್ಲರಿಗೂ ತಿಳಿಯಪಡಿಸುವ ಮತ್ತು ಅರಿವು ಮೂಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜನವರಿ 26, 2024 ರಿಂದ ಫೆಬ್ರವರಿ 24, 2024ರ ವರೆಗೆ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. 

ಸಮಾಜ ಕಲ್ಯಾಣ ವತಿಯಿಂದ ರಾಜ್ಯದ ವಿವಿಧೆಡೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಯೋಜನೆಯ ಭಾಗವಾಗಿ  ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ ಜಿಲ್ಲಾ ಕೇಂದ್ರಗಳಲ್ಲಿ ಫ್ಲಾಷ್‌ಮಾಬ್‌ ಡ್ಯಾನ್ಸ್‌ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನವಾಗುತ್ತಿದೆ.  

ಇದನ್ನೂ ಓದಿ:Jahnvi Kapoor: ಬಾಲಿವುಡ್ ಸುಂದರಿ ಜಾನ್ವಿ ಕಪೂರ್’ಗೆ RCBಯ ಆ ಇಬ್ಬರು ಆಟಗಾರರೇ ಫೇವರೇಟ್ ಕ್ರಿಕೆಟರ್ಸ್!

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರದ ಬ್ರಿಗೆಡ್‌ ರೋಡ್‌ ಜಂಕ್ಷನ್‌, ಮೆಜೆಸ್ಟಿಕ್‌, ಗೋಪಾಲನ್‌ ಟೆಕ್‌ ಪಾರ್ಕ್‌, ಗೋಪಾಲನ್‌ ಮಾಲ್‌ ಆರ್‌ ಆರ್‌ ನಗರ ಮತ್ತು ರಾಜಾಜಿನಗರದ ರಾಮಮಂದಿರ ಬಳಿ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧೆಡೆ ಫ್ಲ್ಯಾಷ್‌ಮಾಬ್‌ ನೃತ್ಯ ನಡೆಸಲಾಗಿದೆ.  

ಈ ಮೂಲಕ ಸಾರ್ವಜನಿಕರಲ್ಲಿ ಹಾಡು, ನೃತ್ಯ ಮತ್ತು ಯಕ್ಷಗಾನದ ಮೂಲಕ ಸಂವಿಧಾನ ಕುರಿತು ಅರಿವು ಮೂಡಿಸುವ ವಿಶೇಷ ಪ್ರಯತ್ನವಾಗುತ್ತಿದೆ. ಜೊತೆಗೆ ಸಂವಿಧಾನದ ಆಶಯಗಳ ಕುರಿತಾದ ಬಿತ್ತಿಪತ್ರಗಳ ಪ್ರದರ್ಶನ ಮಾಡಲಾಯಿತು.  ಸಾರ್ವಜನಿಕ ಸ್ಥಳಗಳಲ್ಲಿ ಫ್ಲ್ಯಾಷ್‌ಮಾಬ್‌ ನೃತ್ಯ ಕೈಗೊಳ್ಳಲಾಗುತ್ತಿದೆ. ಸಂವಿಧಾನದ ಅರಿವಿಗಾಗಿ ಈ ಪ್ರಯತ್ನ ನಿಜಕ್ಕೂ ಪ್ರಶಂಸನೀಯ. ಈ ವಿಭಿನ್ನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: ತಮಿಳುನಾಡು ಸಚಿವ ಮುರುಗನ್ ವಿರುದ್ಧ ಪ್ರತಿಭಟನೆ: ಒಣಗಿದ ತರಗು ಪ್ರದರ್ಶಿಸಿ ಆಕ್ರೋಶ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News