ಕರೋನಾ ಹೆಚ್ಚಳ: ರಾಷ್ಟ್ರ ರಾಜಧಾನಿಯಲ್ಲಿ ಮಾಸ್ಕ್ ಕಡ್ಡಾಯ

ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ವೈರಸ್ ಹರಡುವುದನ್ನು ತಡೆಯಲು ಜನರು ಸಾರ್ವಜನಿಕ ಸ್ಥಳಗಳಲ್ಲಿ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

Written by - Yashaswini V | Last Updated : Aug 11, 2022, 10:55 AM IST
  • ದೆಹಲಿಯಲ್ಲಿ ಇನ್ಮುಂದೆ ಫೇಸ್ ಮಾಸ್ಕ್ ಕಡ್ಡಾಯ
  • ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಧರಿಸುವುದು ಕಡ್ಡಾಯ
  • ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂಪಾಯಿ ದಂಡ
ಕರೋನಾ ಹೆಚ್ಚಳ: ರಾಷ್ಟ್ರ ರಾಜಧಾನಿಯಲ್ಲಿ ಮಾಸ್ಕ್ ಕಡ್ಡಾಯ  title=
Face Mask

ನವದೆಹಲಿ: ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಇದರೊಂದಿಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. 

ದೆಹಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ವೈರಸ್ ಹರಡುವುದನ್ನು ತಡೆಯಲು ಜನರು ಸಾರ್ವಜನಿಕ ಸ್ಥಳಗಳಲ್ಲಿ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಈಗ ದೆಹಲಿಯಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ. ಆದಾಗ್ಯೂ, ಕಡ್ಡಾಯ ಫೇಸ್ ಮಾಸ್ಕ್ ನಿಯಮವು ಖಾಸಗಿ ಕಾರಿನಲ್ಲಿ ಪ್ರಯಾಣಿಸುವಾಗ ಅನ್ವಯಿಸುವುದಿಲ್ಲ.

ಇದನ್ನೂ ಓದಿ- GAIL Recruitment 2022 : GAIL ನಲ್ಲಿ 282 ಖಾಲಿ ಹುದ್ದೆಗಳಿಗೆ ಅರ್ಜಿ : ವಿವರಗಳಿಗೆ ಇಲ್ಲಿ ಪರಿಶೀಲಿಸಿ 

ರಾಷ್ಟ್ರ ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಸ್ವಲ್ಪ ಕುಸಿತ ಕಂಡು ಬಂದಿದೆ. ದೆಹಲಿಯಲ್ಲಿ ಮಂಗಳವಾರದಂದು 2,495 ಕರೋನಾ ಪ್ರಕರಣಗಳು ವರದಿ ಆಗಿದ್ದರೆ, ಬುಧವಾರದಂದು  2,146 ಕರೋನಾ ಪ್ರಕರಣಗಳು ದಾಖಲಾಗಿದೆ. 

ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ  ಕರೋನಾವೈರಸ್‌ನಿಂದ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ನಗರದ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 17.83 ಕ್ಕೆ ಏರಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 8,205 ರಷ್ಟಿದೆ, ಈ ಪೈಕಿ 5,549 ರೋಗಿಗಳು ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇದನ್ನೂ ಓದಿ- "ನನಗೆ 2020 ರಲ್ಲಿ ಸಿಎಂ ಆಗಲು ಇಷ್ಟವಿರಲಿಲ್ಲ, ಆದಾಗ್ಯೂ ನನಗೆ ಒತ್ತಡ ಹೇರಲಾಯಿತು"

ಕಳೆದ 24 ಗಂಟೆಗಳಲ್ಲಿ 2,439 ರೋಗಿಗಳು ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 19,40,984 ಕ್ಕೆ ಏರಿದೆ, ಆದರೆ ದೆಹಲಿಯ ಒಟ್ಟು ಕೇಸಲೋಡ್ 19,75,540 ಮತ್ತು ಸಾವಿನ ಸಂಖ್ಯೆ 26,351 ಕ್ಕೆ ಏರಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News