Kumbh Mela: ಕರೋನಾ ಬಿಕ್ಕಟ್ಟಿನ ಮಧ್ಯೆ ಸಂತರಿಗೆ ಪ್ರಧಾನಿ ಮೋದಿ ಮಾಡಿದ ಮನವಿ ಏನು ಗೊತ್ತಾ?

PM Modi Requests Kumbh Mela Should Be Symbolic: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭವನ್ನು ಸಾಂಕೇತಿಕವಾಗಿ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶನಂದ್ ಗಿರಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ವೇಳೆ ತಿಳಿಸಿದ್ದಾರೆ.

Written by - Yashaswini V | Last Updated : Apr 17, 2021, 10:39 AM IST
  • ಕಳೆದ 1 ವಾರದಲ್ಲಿ ದೇಶಾದ್ಯಂತ ಸುಮಾರು 13 ಲಕ್ಷ ಕರೋನಾ ಪ್ರಕರಣಗಳು ವರದಿಯಾಗಿವೆ
  • ಈ ಮಧ್ಯೆ ಕುಂಭ ಮೇಳಕ್ಕೆ ಸಂಬಂಧಿಸಿದಂತೆ ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವಧೇಶನಂದ್ ಗಿರಿ ಜಿ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ
  • ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ
Kumbh Mela: ಕರೋನಾ ಬಿಕ್ಕಟ್ಟಿನ ಮಧ್ಯೆ ಸಂತರಿಗೆ ಪ್ರಧಾನಿ ಮೋದಿ ಮಾಡಿದ ಮನವಿ ಏನು ಗೊತ್ತಾ? title=
Kumbh Mela 2021

ನವದೆಹಲಿ: ದೇಶಾದ್ಯಂತ ದಿನೇ ದಿನೇ  ಹೊಸ ದಾಖಲೆ ಬರೆಯುತ್ತಿರುವ ಮಹಾಮಾರಿ ಕರೋನಾವೈರಸ್ ಅಟ್ಟಹಾಸ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಕಳೆದ 1 ವಾರದಲ್ಲಿ ದೇಶಾದ್ಯಂತ ಸುಮಾರು 13 ಲಕ್ಷ ಕರೋನಾ ಪ್ರಕರಣಗಳು ವರದಿಯಾಗಿವೆ. ಈ ಮಧ್ಯೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳವನ್ನು ಸಾಂಕೇತಿಕವಾಗಿ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಸಂತರಿಗೂ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), 'ಆಚಾರ್ಯ ಮಹಾಮಂಡಲೇಶ್ವರ ಪೂಜ್ಯ ಸ್ವಾಮಿ ಅವಧೇಶನಂದ್ ಗಿರಿ ಜಿ ಅವರೊಂದಿಗೆ ಇಂದು ಫೋನ್‌ನಲ್ಲಿ ಮಾತನಾಡಿದ್ದೇನೆ. ಎಲ್ಲಾ ಸಂತರ ಆರೋಗ್ಯದ ಬಗ್ಗೆ ವಿವರ ಪಡೆದಿದ್ದು, ಎಲ್ಲಾ ಸಂತರು ಆಡಳಿತಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುತ್ತಿದ್ದಾರೆ. ಇದಕ್ಕಾಗಿ ಸಂತ ಜಗತ್ತಿಗೆ ಧನ್ಯವಾದ ಅರ್ಪಿಸುತ್ತೇನೆ' ಎಂದು ತಿಳಿಸಿದ್ದಾರೆ.<

ಇದನ್ನೂ ಓದಿ - Covid-19 Symptoms In Kids: ಮಕ್ಕಳಲ್ಲಿ ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೊಳಪಡಿಸಿ..!

ಎರಡು ಶಾಯಿ ಸ್ನಾನಗಳು ನಡೆದಿವೆ ಮತ್ತು ಕರೋನಾದ (Coronavirus) ಬಿಕ್ಕಟ್ಟಿನಿಂದಾಗಿ ಈಗ ಕುಂಭವನ್ನು ಸಾಂಕೇತಿಕವಾಗಿ ನಡೆಸಬೇಕು ಎಂದು ನಾನು ವಿನಂತಿಸುತ್ತೇನೆ. ಈ ಬಿಕ್ಕಟ್ಟಿನ ವಿರುದ್ಧದ ಹೋರಾಟಕ್ಕೆ ಇದು ಒಂದು ಬಲವನ್ನು ನೀಡುತ್ತದೆ ಎಂದು ಪಿಎಂ ಮೋದಿ ತಮ್ಮ ಟ್ವೀಟ್‌ನಲ್ಲಿ ಬರೆದಿದ್ದಾರೆ.

ಪ್ರಧಾನಿ ಮೋದಿಯವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿರುವ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶನಂದ್ ಗಿರಿ, 'ಪ್ರಧಾನ ಮಂತ್ರಿಯವರ ಕರೆಯನ್ನು ನಾವು ಗೌರವಿಸುತ್ತೇವೆ. ಜೀವನವನ್ನು ರಕ್ಷಿಸುವುದು ದೊಡ್ಡ ಸದ್ಗುಣ. ಕೋವಿಡ್‌ನ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಶಾಹಿ ಸ್ನಾನಕ್ಕೆ ಬರಬೇಡಿ ಮತ್ತು ನಿಯಮಗಳನ್ನು ಅನುಸರಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ - Coronavirus: ಕರೋನಾವೈರಸ್‌ನಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಲಿವೆ- ನಿತಿನ್ ಗಡ್ಕರಿ ಎಚ್ಚರಿಕೆ

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,34,692 ಹೊಸ ಕರೋನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು 1,341 ಜನರು ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ 1,45,26,609 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 1,26,71,220 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 16,79,740 ಸಕ್ರಿಯ ಕರೋನಾ ಪ್ರಕರಣಗಳಿದ್ದು, 1,75,649 ಜನರು ವೈರಸ್‌ನಿಂದ ಸಾವನ್ನಪ್ಪಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

  

Trending News