ಕರೋನಾ: ಈ ರಾಜ್ಯ ಸರ್ಕಾರದಿಂದ ದೀಪಾವಳಿ ಮಾರ್ಗಸೂಚಿ ಬಿಡುಗಡೆ, ಪ್ರಮುಖ ವಿಷಯಗಳನ್ನು ತಿಳಿಯಿರಿ

ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ದೀಪಾವಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.

Last Updated : Nov 6, 2020, 12:55 PM IST
  • ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಹಿನ್ನಲೆಯಲ್ಲಿ ಇತರ ಹಬ್ಬಗಳನ್ನು ಸರಳವಾಗಿ ಆಚರಿಸಿದಂತೆ ದೀಪಾವಳಿ ಹಬ್ಬವನ್ನೂ ಸರಳತೆವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳಿದೆ.
  • ಮಾಸ್ಕ್, ಸ್ಯಾನಿಟೈಜರ್ ಅನ್ನು ಬಳಸುವಂತೆ ಸೂಚನೆ
  • ಈ ಬಾರಿ ದೀಪಾವಳಿಯಂದು ಕರೋನಾ ಸಾಂಕ್ರಾಮಿಕವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ.
ಕರೋನಾ: ಈ ರಾಜ್ಯ ಸರ್ಕಾರದಿಂದ ದೀಪಾವಳಿ ಮಾರ್ಗಸೂಚಿ ಬಿಡುಗಡೆ, ಪ್ರಮುಖ ವಿಷಯಗಳನ್ನು ತಿಳಿಯಿರಿ title=

ಮುಂಬೈ: ಮಹಾರಾಷ್ಟ್ರದಲ್ಲಿ ಕರೋನವೈರಸ್ (Coronavirus) ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ದೀಪಾವಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಹಿನ್ನಲೆಯಲ್ಲಿ ಇತರ ಹಬ್ಬಗಳನ್ನು ಸರಳವಾಗಿ ಆಚರಿಸಿದಂತೆ ದೀಪಾವಳಿ ಹಬ್ಬವನ್ನೂ ಸರಳತೆವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳಿದೆ.

ಮಹಾರಾಷ್ಟ್ರ (Maharashtra) ಸರ್ಕಾರದಿಂದ ಹೊಸದಾಗಿ ಬಿಡುಗಡೆ ಮಾಡಲಾಗಿರುವ ಮಾರ್ಗಸೂಚಿಗಳ ಪ್ರಕಾರ ದೇವಾಲಯಗಳನ್ನು ಇನ್ನೂ ತೆರೆಯಲಾಗಿಲ್ಲ, ಆದ್ದರಿಂದ ಪ್ರತಿಯೊಬ್ಬರೂ ಮನೆಯಲ್ಲಿ ಪೂಜೆ ಮಾಡಬೇಕೆಂದು ಜನರಿಗೆ ಮನವಿ ಮಾಡಿದ್ದಾರೆ. ಅಲ್ಲದೆ ದೀಪಾವಳಿಯ (Deepavali) ಕಾರಣದಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯನ್ನು ಒಟ್ಟುಗೂಡಿಸದಿರುವುದು ಮತ್ತು ಮಾಸ್ಕ್, ಸ್ಯಾನಿಟೈಜರ್ ಅನ್ನು ಬಳಸುವಂತೆ ಸೂಚನೆ ನೀಡಲಾಗಿದೆ. 

ಭಾರತದಲ್ಲಿ ತಯಾರಾಯಿತು covid-19 ಲಸಿಕೆ: ಫೆಬ್ರವರಿಯಲ್ಲಿ ಲಭ್ಯ!

ಮಾರ್ಗಸೂಚಿಯಲ್ಲಿನ ಇತರ ಪ್ರಮುಖ ಅಂಶಗಳು-

ಪಟಾಕಿಗಳನ್ನು ಸುಡದಂತೆ ಮನವಿ :
ಪಟಾಕಿಗಳನ್ನು ಸುಡದಿರುವುದು ಉತ್ತಮ ಏಕೆಂದರೆ ಅದು ಪರಿಸರವನ್ನು ಹಾನಿಗೊಳಿಸುತ್ತದೆ ಮತ್ತು ಗಾಳಿ ಮತ್ತು ಶಬ್ದ ಮಾಲಿನ್ಯವನ್ನು ಹೆಚ್ಚಿಸುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಪಟಾಕಿಗಳನ್ನು ಹಚ್ಚಿ ಪರಿಸರವನ್ನು ಹಾಳು ಮಾಡುವ ಬದಲಿಗೆ ಪರಿಸರ ರಕ್ಷಣೆಯತ್ತ ಗಮನಹರಿಸುವಂತೆ ಮನವಿ ಮಾಡಲಾಗಿದೆ.

ದೀಪಾವಳಿ ಎಂದರೆ ದೀಪಗಳ ಹಬ್ಬ, ಆದ್ದರಿಂದ ಹೆಚ್ಚು ಹೆಚ್ಚು ದೀಪಗಳನ್ನು ಬೆಳಗಿಸುವ ಮೂಲಕ ಹಬ್ಬವನ್ನು ಆಚರಿಸಿ. ಕರೋನಾ ಸೋಂಕಿನ ಅಪಾಯವನ್ನು ಗಮನಿಸಿದರೆ ವೃದ್ಧರು ಮತ್ತು ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸಬೇಡಿ ಎಂದು ಸರ್ಕಾರ ಸೂಚನೆ ನೀಡಿದೆ.

ದೆಹಲಿ ಕರೋನವೈರಸ್‌ನ ಮೂರನೇ ತರಂಗವನ್ನು ಎದುರಿಸುತ್ತಿದೆ- ಸಿಎಂ ಅರವಿಂದ್ ಕೇಜ್ರಿವಾಲ್

ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಇಲ್ಲ ಅನುಮತಿ:
ಈ ಬಾರಿ ದೀಪಾವಳಿಯಂದು ಕರೋನಾ ಸಾಂಕ್ರಾಮಿಕವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ಆನ್‌ಲೈನ್ ಮೂಲಕ ಮಾತ್ರ ಯಾವುದೇ ಕಾರ್ಯಕ್ರಮವನ್ನು ಆಯೋಜಿಸಿ ಮತ್ತು ಭಾಗವಹಿಸಿ. ಸಾಂಸ್ಕೃತಿಕ ಕಾರ್ಯಕ್ರಮಗಳ ಬದಲಾಗಿ, ಈ ದೀಪಾವಳಿಯಂದು ರಕ್ತದಾನ ಶಿಬಿರಗಳನ್ನು ಆಯೋಜಿಸಿ ಮತ್ತು ರಕ್ತದಾನ ಮಾಡಿ ಮತ್ತು ಸ್ವಚ್ಛತೆ ಅಭಿಯಾನವನ್ನು ನಡೆಸಿ ಎಂದು ಸಲಹೆ ನೀಡಲಾಗಿದೆ.

Alert: ರೈಲಿನಲ್ಲಿ ಈ ನಿಯಮ ಪಾಲಿಸದಿದ್ದರೆ 5 ವರ್ಷ ಜೈಲು

ಕೋವಿಡ್ -19 ರ ನಿಯಮಗಳನ್ನು ಅನುಸರಿಸುವುದು: 
ಕೋವಿಡ್ -19 (Covid 19) ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಸಮಯದಲ್ಲಿ ಚಿಕಿತ್ಸೆ, ಪರಿಸರ ಮತ್ತು ಕಾನೂನು ಸೌಲಭ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಆಸ್ಪತ್ರೆ, ಪುರಸಭೆ, ಸ್ಥಳೀಯ ಆಡಳಿತ ಮತ್ತು ಪೊಲೀಸರ ಜವಾಬ್ದಾರಿಯಾಗಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
 

Trending News