ದೆಹಲಿಯಲ್ಲಿ ನಿಯಂತ್ರಣ ತಪ್ಪಿದ ಕರೋನಾ: ಇಂದು ಸರ್ವಪಕ್ಷ ಸಭೆ ಕರೆದ ಸಿಎಂ ಕೇಜ್ರಿವಾಲ್

ಕೊರೊನಾವೈರಸ್ನ ಹದಗೆಟ್ಟ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ದೆಹಲಿಯ ಕೇಜ್ರಿವಾಲ್ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದಿದ್ದು, ಇದರಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ನಾಯಕರನ್ನು ಆಹ್ವಾನಿಸಲಾಗಿದೆ.

Last Updated : Nov 19, 2020, 07:23 AM IST
  • ಕಳೆದ 24 ಗಂಟೆಗಳಲ್ಲಿ 131 ಸಾವು ದೆಹಲಿ ಜನತೆಯ ಆತಂಕವನ್ನು ಹೆಚ್ಚಿಸಿದೆ
  • ದೆಹಲಿಯಲ್ಲಿ ಎಲ್ಲಾ ಪಕ್ಷಗಳು ಇಂದು ಬೆಳಿಗ್ಗೆ 11 ಗಂಟೆಗೆ ಸಭೆ ಸೇರಲಿವೆ
  • ದೆಹಲಿಯಲ್ಲಿ ಹದಗೆಟ್ಟಿರುವ ಕರೋನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು
ದೆಹಲಿಯಲ್ಲಿ ನಿಯಂತ್ರಣ ತಪ್ಪಿದ ಕರೋನಾ: ಇಂದು ಸರ್ವಪಕ್ಷ ಸಭೆ ಕರೆದ ಸಿಎಂ ಕೇಜ್ರಿವಾಲ್  title=
File Image

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ನವೆಂಬರ್ 19) ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಹಾಜರಿರಲಿದ್ದಾರೆ.

ಸಭೆಯಲ್ಲಿ ಚರ್ಚಿಸಲಾಗುವ ಮುಖ್ಯ ವಿಷಯ:
ಕರೋನಾದಿಂದ ಹದಗೆಡುತ್ತಿರುವ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಇಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಲಿದೆ. ನಿಯಂತ್ರಣ ತಪ್ಪಿರುವ ಕರೋನವೈರಸ್ ಅನ್ನು ಹಿಡಿತಕ್ಕೆ ತರಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಗುವುದು. 

ಅದೇ ಸಮಯದಲ್ಲಿ ಕೇಂದ್ರ ಸರ್ಕಾರ (Central Government) ಈಗಾಗಲೇ ಕಾರ್ಯರೂಪಕ್ಕೆ ಬಂದಿದೆ ಮತ್ತು 100 ಖಾಸಗಿ ಆಸ್ಪತ್ರೆಗಳ ಬಗ್ಗೆ ವರದಿ ಮಾಡಲು ಕೇಂದ್ರವು 10 ತಂಡಗಳನ್ನು ರಚಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕರೋನಾ ರೋಗಿಗಳಿಗಾಗಿ ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಗೃಹ ಸಚಿವಾಲಯಕ್ಕೆ ಸಲ್ಲಿಸಲಿವೆ.

ದೆಹಲಿ ವಾಸಿಗಳ ಆತಂಕಕ್ಕೆ ಕಾರಣ: 
ದೆಹಲಿಯಲ್ಲಿ ಕರೋನಾ ಸೋಂಕು ಮತ್ತೊಮ್ಮೆ ವೇಗವಾಗಿ ಹೆಚ್ಚುತ್ತಿದೆ ಮತ್ತು ಏತನ್ಮಧ್ಯೆ ಬುಧವಾರ 24 ಗಂಟೆಗಳಲ್ಲಿ 131 ರೋಗಿಗಳ ಸಾವು ಆತಂಕವನ್ನು ಹೆಚ್ಚಿಸಿದೆ. ಇದಕ್ಕೂ ಮುನ್ನ ನವೆಂಬರ್ 12 ರಂದು 104 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 10 ದಿನಗಳಲ್ಲಿ ಕರೋನಾದ ಸಾವಿನ ಪ್ರಮಾಣವು ಶೇಕಡಾ 1.48 ರಷ್ಟಿದೆ. ದೆಹಲಿಯಲ್ಲಿ ಬುಧವಾರ 7486 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ.

ಇತರ ದೇಶಗಳಂತೆ ಭಾರತದಲ್ಲಿಯೂ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆಯೇ?

ಮತ್ತೆ ಜಾರಿಯಾಗಲ್ಲ ಲಾಕ್‌ಡೌನ್ :
ಜೀ ನ್ಯೂಸ್‌ನೊಂದಿಗಿನ ವಿಶೇಷ ಸಂವಾದದಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ್ ವರ್ಧನ್, ದೆಹಲಿಯಲ್ಲಿ ಲಾಕ್‌ಡೌನ್ (Lockdown) ಜಾರಿಗೆ ತರುವುದು ಸಂಪೂರ್ಣ ಪರಿಹಾರವಲ್ಲ ಎಂದು ಹೇಳಿದರು. ಅದೇ ಸಮಯದಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ದೆಹಲಿಯಲ್ಲಿ ಲಾಕ್‌ಡೌನ್ ಆಗುವುದಿಲ್ಲ ಎಂದು ಹೇಳಿದರು. 

ಹೆಚ್ಚುತ್ತಿರುವ ಕರೋನಾ ನಿಗ್ರಹಿಸಲು ಕೇಜ್ರಿವಾಲ್ ಮಹತ್ವದ ಹೆಜ್ಜೆ

ಇನ್ನು ದೆಹಲಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೆಹಲಿಯಿಂದ ನೋಯ್ಡಾಕ್ಕೆ ಹೋಗುವವರ ರ್ಯಾಂಡಮ್ ಟೆಸ್ಟ್ ಮಾಡಿಸಲಾಗುವುದು. ಕೆಲವು ವಾರಗಳ ಹಿಂದೆ ಕೋವಿಡ್ -19 (Covid 19) ಪರಿಸ್ಥಿತಿ ಸುಧಾರಿಸಿದಾಗ ಮದುವೆ ಸೇರಿದಂತೆ ಮತ್ತಿತರ ಶುಭ ಸಮಾರಂಭಗಳಲ್ಲಿ ಕೆಲವು ನಿಯಮಗಳನ್ನು ಸಡಿಲಿಸಲಾಯಿತು. ಸಮಾರಂಭಗಳಲ್ಲಿ ಪಾಲ್ಗೊಳ್ಳಲು 50 ರಿಂದ 200 ಜನರಿಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಸರ್ಕಾರ ಈ ಆದೇಶವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದೆ.
 

Trending News