ಹೊಸ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಜನವರಿ 31ರವರೆಗೆ Lockdown ವಿಸ್ತರಣೆ

ರಾಜ್ಯದಲ್ಲಿ ಕರೋನಾ ವೈರಸ್ ಹರಡುವುದನ್ನು ತಡೆಯಲು ಮಹಾರಾಷ್ಟ್ರ ಸರ್ಕಾರ 2021 ಜನವರಿ 31 ರವರೆಗೆ ಲಾಕ್‌ಡೌನ್ ನಿರ್ಬಂಧನೆಗಳನ್ನು ವಿಸ್ತರಿಸಿದೆ.

Written by - Nitin Tabib | Last Updated : Dec 30, 2020, 12:57 PM IST
  • ಹೊಸ ರೂಪಾಂತರಿ ಕೊರೊನಾ ವೈರಸ್ ಪತ್ತೆ ಹಿನ್ನೆಲೆ
  • ಮಹಾರಾಷ್ಟ್ರದಲ್ಲಿ ಜನವರಿ 31, 2021ರವರೆಗೆ ಲಾಕ್ ಡೌನ್ ವಿಸ್ತರಣೆ.
  • ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ,
ಹೊಸ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಜನವರಿ 31ರವರೆಗೆ Lockdown ವಿಸ್ತರಣೆ title=
Lockdown (File Image)

ಮುಂಬೈ: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು, ಮಹಾರಾಷ್ಟ್ರ ಸರ್ಕಾರವು 2021 ಜನವರಿ 31 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ. COVID-19 ವೈರಸ್ ಹರಡುವುದು ಮಹಾರಾಷ್ಟ್ರ ರಾಜ್ಯಕ್ಕೆ ಅಪಾಯಕಾರಿಯಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ವೈರಸ್ ಹರಡುವುದನ್ನು ತಡೆಯಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಲಾಕ್‌ಡೌನ್ ಅನ್ನು ಜನವರಿ 31 ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರಿಯಲಿವೆ ಎಂದು ತನ್ನ ಆದೇಶದಲ್ಲಿ ಸರ್ಕಾರ ತಿಳಿಸಿದೆ.

ಇದನ್ನು ಓದಿ- ಅಂತರಾಷ್ಟ್ರೀಯ ಪ್ರಯಾಣಿಕರಿಗೆ ರೂಪಾಂತರಿ ಪರೀಕ್ಷೆಗೆ ಮುಂದಾದ ಭಾರತ

ದೇಶದಲ್ಲಿ ಕರೋನದ ಹೊಸ ರೂಪಾಂತರಿ ತಳಿಗಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದೆ ವೇಳೆ  ಮುಂಬೈ ವಿಮಾನ ನಿಲ್ದಾಣಕ್ಕೆ ಮಂಗಳವಾರ 664 ಪ್ರಯಾಣಿಕರು ಆಗಮಿಸಿದ್ದು, ಈ ಪೈಕಿ 361 ಪ್ರಯಾಣಿಕರನ್ನು ನಗರದಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಒಟ್ಟು ಒಂಬತ್ತು ಅಂತರರಾಷ್ಟ್ರೀಯ ವಿಮಾನಗಳು ಮಂಗಳವಾರ ಇಲ್ಲಿಗೆ ಬಂದಿವೆ ಎಂದು ಪುರಸಭೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 254 ಪ್ರಯಾಣಿಕರಿಗೆ ಇತರ ರಾಜ್ಯಗಳಿಗೆ ಹೋಗಲು ಅನುಮತಿ ನೀಡಲಾಗಿದ್ದು, ಕೆಲವು ಪ್ರಯಾಣಿಕರು ಗರ್ಭಿಣಿಯಾಗಿರುವ  ಮತ್ತು ವಯಸ್ಸಾಗಿರುವ ಕಾರಣ  ಕಡ್ಡಾಯ ಕ್ವಾರಂಟೀನ್  ನಿಯಮದಿಂದ ರಿಯಾಯಿತಿ ನೀಡಲಾಗಿದೆ.

ಇದನ್ನು ಓದಿ- 'ಕೊರೊನಾ ಲಸಿಕೆ ವಿಫಲವಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ'

ಯುರೋಪಿಯನ್ ರಾಷ್ಟ್ರಗಳು ಮತ್ತು ಪಶ್ಚಿಮ ಏಷ್ಯಾದಿಂದ ಬರುವ ಪ್ರಯಾಣಿಕರನ್ನು ಸಾಂಸ್ಥಿಕ ಸಂಪರ್ಕತಡೆಯಲ್ಲಿ ಇರಿಸಿಕೊಳ್ಳಲು ಪುರಸಭೆ ಭಾನುವಾರ ಪ್ರಮಾಣಿತ ಕಾರ್ಯಾಚರಣೆಯ ವಿಧಾನದಲ್ಲಿ ತಿದ್ದುಪಡಿ ಮಾಡಿದೆ. ಬ್ರಿಟನ್ ನಲ್ಲಿ ಹೊಸ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾದ ಬಳಿಕವೇ ಇದನ್ನು ಜಾರಿಗೆ ತರಲಾಗಿದೆ.

ಇದನ್ನು ಓದಿ- ಬ್ರಿಟನ್ ನಿಂದ ಭಾರತಕ್ಕೆ ಬರುವ ವಿಮಾನಗಳಿಗೆ ನಿಷೇಧ ಹೇರುವ ಸಾಧ್ಯತೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News