ಕೊರೊನಾ 2ನೇ ಅಲೆಯ ಆರ್ಭಟ ಇನ್ನೂ ಮುಗಿದಿಲ್ಲ: ಕೇಂದ್ರದ ಎಚ್ಚರಿಕೆ ಸಂದೇಶ

ದೇಶದಲ್ಲಿ ಹೆಚ್ಚು ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆದ ನಂತರವೂ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು ಎಂದು ಹೇಳಿದ್ದಾರೆ.

Written by - Puttaraj K Alur | Last Updated : Aug 26, 2021, 05:43 PM IST
  • ದೇಶದಲ್ಲಿ 1 ಲಕ್ಷ ಸಕ್ರಿಯ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ಏಕೈಕ ರಾಜ್ಯ ಕೇರಳ ಆಗಿದೆ
  • ಪ್ರತಿಯೊಬ್ಬರೂ ಕೊರೊನಾ ಬಗ್ಗೆ ನಿರ್ಲಕ್ಷ್ಯವಹಿಸದೆ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಬೇಕು
  • ಕೊರೊನಾ ಲಸಿಕೆ ಪಡೆದ ನಂತರವೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
ಕೊರೊನಾ 2ನೇ ಅಲೆಯ ಆರ್ಭಟ ಇನ್ನೂ ಮುಗಿದಿಲ್ಲ: ಕೇಂದ್ರದ ಎಚ್ಚರಿಕೆ ಸಂದೇಶ title=
ದೇಶದ ಜನರಿಗೆ ಎಚ್ಚರಿಕೆ ಸಂದೇಶ ನೀಡಿದ ಕೇಂದ್ರ ಸರ್ಕಾರ (Photo Courtesy: @India.com)

ನವದೆಹಲಿ: ದೇಶದಲ್ಲಿ ಕೋವಿಡ್-19 2ನೇ ಅಲೆ(COVID-19 2nd Wave)ಯ ಆರ್ಭಟ ಇನ್ನೂ ಮುಗಿದಿಲ್ಲ, ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನತೆಗೆ ಕೇಂದ್ರ ಸರ್ಕಾರ ಗುರುವಾರ ಎಚ್ಚರಿಕೆ ಸಂದೇಶ ನೀಡಿದೆ. ಕೇರಳದಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಸಲಹೆ ನೀಡಲಾಗಿದೆ.  

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷನ್(Rajesh Bhushan), ‘ಹಬ್ಬದ ಸೀಸನ್ ಇರುವುದರಿಂದ ಸೆಪ್ಟೆಂಬರ್-ಅಕ್ಟೋಬರ್ ತಿಂಗಳುಗಳು ನಮಗೆ ನಿರ್ಣಾಯಕವಾಗಿವೆ’ ಎಂದು ಹೇಳಿದ್ದಾರೆ. ‘ನಾವು ಇನ್ನೂ ಕೋವಿಡ್ -19 2ನೇ ಅಲೆ(COVID-19 2nd Wave)ಯ ಭೀತಿಯಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಹಲವಾರು ಹಬ್ಬಗಳು ಇರುವುದರಿಂದ ಸಾಂಕ್ರಾಮಿಕ ರೋಗದ ನಿರ್ವಹಣೆಯಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳು ನಿರ್ಣಾಯಕವಾಗಿವೆ’ ಎಂದು ಹೇಳಿದ್ದಾರೆ.  

ಇದನ್ನೂ ಓದಿ: PM Kisan ಯೋಜನೆಯ ಲಾಭವನ್ನು ಗಂಡ ಮತ್ತು ಹೆಂಡತಿ ಇಬ್ಬರೂ ಪಡೆಯಬಹುದೇ? ಇಲ್ಲಿದೆ ನೋಡಿ!

ದೇಶದಲ್ಲಿ 1 ಲಕ್ಷ ಸಕ್ರಿಯ ಕೊರೊನಾ ಪ್ರಕರಣ(Corona Cases)ಗಳು ದಾಖಲಾಗುತ್ತಿರುವ ಏಕೈಕ ರಾಜ್ಯ ಕೇರಳ(Kerala)ವಾಗಿದ್ದು, 4 ರಾಜ್ಯಗಳಲ್ಲಿ 10 ಸಾವಿರದಿಂದ 1 ಲಕ್ಷ ಸಕ್ರಿಯ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು. ಕೇರಳದಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ 10 ಸಾವಿರದಿಂದ 1 ಲಕ್ಷ ಸಕ್ರಿಯ ಪ್ರಕರಣಗಳಿವೆ. ಕೇರಳವು ಶೇ.51ರಷ್ಟು, ಮಹಾರಾಷ್ಟ್ರ ಶೇ.16ರಷ್ಟು ಮತ್ತು ಉಳಿದ 3 ರಾಜ್ಯಗಳು ದೇಶದ ಶೇ.4-5ರಷ್ಟು ಪ್ರಕರಣಗಳಿಗೆ ಕೊಡುಗೆ ನೀಡುತ್ತಿವೆ ಎಂದು ರಾಜೇಶ್ ಭೂಷಣ್ ಮಾಹಿತಿ ನೀಡಿದ್ದಾರೆ.  

ದೇಶದಲ್ಲಿ ಹೆಚ್ಚು ಹೆಚ್ಚು ಜನರಿಗೆ ಕೋವಿಡ್ ಲಸಿಕೆ(Corona Vaccine)ನೀಡಲಾಗುತ್ತಿದೆ. ಲಸಿಕೆ ಪಡೆದ ನಂತರವೂ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಖಂಡಿತ ಅಪಾಯ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಪತ್ತೆಯಾದ 46 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳ ಪೈಕಿ ಶೇ.58ರಷ್ಟು ಸೋಂಕಿತರು ಕೇರಳದಲ್ಲಿಯೇ ಪತ್ತೆಯಾಗಿದ್ದಾರೆ. ಉಳಿದ ರಾಜ್ಯಗಳಲ್ಲಿ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Operation Devi Shakti: IAF ವಿಮಾನದಲ್ಲಿ ಕಾಬೂಲ್‌ನಿಂದ ದೆಹಲಿಗೆ ಪ್ರಯಾಣಿಸಿದ 24 ಭಾರತೀಯರು ಮತ್ತು 11 ನೇಪಾಳ್ ನಾಗರೀಕರು

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 46,164 ಹೊಸ ಸೋಂಕಿತರು ಪತ್ತೆಯಾಗಿದ್ದು, 607 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಕೇರಳದಲ್ಲಿಯೇ 31,445 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 215 ಮಂದಿ ಬಲಿಯಾಗಿದ್ದಾರೆ.  

ದೇಶದಲ್ಲಿ ಕೋವಿಡ್-19(COVID-19) ಸೋಂಕಿತರ ಸಂಖ್ಯೆ 3,25,58,530ಕ್ಕೆ ಏರಿಕೆಯಾಗಿದ್ದು, ಒಟ್ಟು 4,36,365 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,33,725ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 80,40,407 ಡೋಸ್ ಕೊರೊನಾ ಲಸಿಕೆ ನೀಡಲಾಗಿದ್ದು, ಇದುವರೆಗೆ ದೇಶದಲ್ಲಿ 60,38,46,475 ಡೋಸ್ ಲಸಿಕೆ ವಿತರಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News