Covid-19: ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಪರೀಕ್ಷೆ ಅಗತ್ಯವಿದೆಯೇ ಅಥವಾ ಇಲ್ಲವೇ? ಸತ್ಯೇಂದ್ರ ಜೈನ್ ಹೇಳಿದ್ದೇನು ಗೊತ್ತಾ

Covid-19: ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಮತ್ತೊಮ್ಮೆ ವೇಗವಾಗಿ ಹೆಚ್ಚಾಗಲಾರಂಭಿಸಿವೆ. ಏತನ್ಮಧ್ಯೆ, ಕೊರೊನಾ ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದ ನಂತರ ರೋಗಲಕ್ಷಣಗಳು ಬರದಿದ್ದರೆ, ಪರೀಕ್ಷೆಯನ್ನು ಮಾಡುವ ಅಗತ್ಯವಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.

Written by - Yashaswini V | Last Updated : Jan 6, 2022, 06:43 AM IST
  • ರೋಗಲಕ್ಷಣಗಳು ಕಾಣಿಸಿಕೊಂಡಾಗ ಪರೀಕ್ಷಿಸಿ
  • ದೆಹಲಿ ಆರೋಗ್ಯ ಸಚಿವರ ಸಲಹೆ
  • ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ಸಲಹೆ ನೀಡಿರುವ ದೆಹಲಿ ಆರೋಗ್ಯ ಸಚಿವರು
Covid-19: ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಪರೀಕ್ಷೆ ಅಗತ್ಯವಿದೆಯೇ ಅಥವಾ ಇಲ್ಲವೇ? ಸತ್ಯೇಂದ್ರ ಜೈನ್ ಹೇಳಿದ್ದೇನು ಗೊತ್ತಾ title=
Covid-19 Test is necessary or not

Covid-19: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕರೋನಾವೈರಸ್ (Coronavirus) ಮತ್ತೆ ವೇಗವಾಗಿ ಹೆಚ್ಚಾಗುತ್ತಿದೆ. ಏತನ್ಮಧ್ಯೆ, ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendra Jain) ಜನರಿಗೆ ಪರಿಹಾರ ನೀಡುವ ಮಾಹಿತಿಯೊಂದನ್ನು ಹಂಚಿಕೊಂಡಿದ್ದು, ಕರೋನಾ ಪಾಸಿಟಿವ್ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ನಂತರ ಯಾವುದೇ ರೋಗಲಕ್ಷಣಗಳಿಲ್ಲದಿದ್ದರೆ, ನಂತರ ಕೋವಿಡ್-19 ಪರೀಕ್ಷೆಯನ್ನು ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ರೋಗಲಕ್ಷಣಗಳು ಕಾಣಿಸಿಕೊಂಡ ನಂತರವೇ ಪರೀಕ್ಷೆಯನ್ನು ಮಾಡಿ:
ಯಾವುದೇ ಒಬ್ಬ ವ್ಯಕ್ತಿಯು ಕರೋನಾ ಪಾಸಿಟಿವ್ (Corona Positive) ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದರೂ ಸಹ ಯಾವುದೇ ರೋಗಲಕ್ಷಣಗಳಿಲ್ಲದಿದ್ದರೆ, ಅವರನ್ನು ಪರೀಕ್ಷಿಸುವ ಅಗತ್ಯವಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್  ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ, ರೋಗಲಕ್ಷಣಗಳು ಕಾಣಿಸಿಕೊಂಡ ನಂತರವೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಜನರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ-  Omicron ಪತ್ತೆಗೆ ಭಾರತ ನಿರ್ಮಿತ RT-PCR ಕಿಟ್ ಗೆ DCGI ಅನುಮೋದನೆ

ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿರುವ ದೆಹಲಿ ಆರೋಗ್ಯ ಸಚಿವ:
ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿಗಳನ್ನು ಉಲ್ಲೇಖಿಸಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendra Jain) ಅವರು, ನೀವು ಯಾವುದೇ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರೆ ಮೊದಲು ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿ ಮತ್ತು ನಿಮ್ಮ ಜ್ವರ ಮತ್ತು ಆಮ್ಲಜನಕದ ಮಟ್ಟವನ್ನು ನಿಯಮಿತವಾಗಿ ಮನೆಯಲ್ಲಿಯೇ ಪರೀಕ್ಷಿಸುತ್ತಿರಿ ಎಂದು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು:
ದೆಹಲಿಯಲ್ಲಿ ಬುಧವಾರವೂ ಕರೋನಾ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈ ವೇಳೆ 8 ಮಂದಿ ಕರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 10,665 ಕೊರೊನಾ ಸೋಂಕಿತ ರೋಗಿಗಳು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.11.88ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಸಕ್ರಿಯ ಸೋಂಕಿತ ರೋಗಿಗಳ ಸಂಖ್ಯೆ 23,307 ಕ್ಕೆ ಏರಿದೆ.

ಇದನ್ನೂ ಓದಿ- ಮುಂದಿನ 4 ರಿಂದ 6 ವಾರಗಳ ಕಾಲ ಸೋಂಕು ಹೆಚ್ಚಾಗಿ ಹರಡುತ್ತೆ, ಜನ ಎಚ್ಚರ ವಹಿಸಬೇಕು: ಆರೋಗ್ಯ ಸಚಿವ ಸುಧಾಕರ್

ಕಳೆದ 24 ಗಂಟೆಗಳಲ್ಲಿ 89,742 ಮಂದಿ ಪರೀಕ್ಷೆಯನ್ನು ಮಾಡಿದ್ದಾರೆ:
ಅದೇ ಸಮಯದಲ್ಲಿ, ಈ ಅವಧಿಯಲ್ಲಿ 2,239 ಜನರು ಕರೋನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ, 89,742 (72,145 RTPCR ಮತ್ತು 17,597 ಅಂಟಿಜೆನ್ ಪರೀಕ್ಷೆಗಳು) ಜನರು ಕರೋನಾ ಪರೀಕ್ಷೆಯನ್ನು ಮಾಡಿಸಿದ್ದಾರೆ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ದೆಹಲಿಯ 10474 ಆಸ್ಪತ್ರೆಗಳಲ್ಲಿ 782 ಆಸ್ಪತ್ರೆಗಳು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿವೆ. ಕಳೆದ 24 ಗಂಟೆಗಳಲ್ಲಿ 782 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News