ರಾಹುಲ್ ಆರೋಪಕ್ಕೆ ಆಜಾದ್, ಸಿಬಲ್ ಸಿಟ್ಟು: CWC ಸಭೆಯಲ್ಲಿ ರಾಜೀನಾಮೆ ಬೆದರಿಕೆ

ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಪಕ್ಷದ ಕೆಲವು ನಾಯಕರು ಪತ್ರ ಬರೆದಿರುವ ಬಗ್ಗೆ ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

Written by - Yashaswini V | Last Updated : Aug 24, 2020, 03:05 PM IST
  • ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ
  • ರಾಹುಲ್ ಟೀಕೆಗೆ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ
ರಾಹುಲ್ ಆರೋಪಕ್ಕೆ ಆಜಾದ್, ಸಿಬಲ್ ಸಿಟ್ಟು: CWC ಸಭೆಯಲ್ಲಿ ರಾಜೀನಾಮೆ ಬೆದರಿಕೆ title=

ನವದೆಹಲಿ:  ಪಕ್ಷದ ನಾಯಕತ್ವದಲ್ಲಿ ಸುಧಾರಣೆಯಾಗಬೇಕು ಎಂದು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವವರಿಗೆ ಬಿಜೆಪಿ ಸಹಕಾರವಿದೆ ಎಂದು ಗಂಭೀರ ಆರೋಪ ಮಾಡಿರುವ ರಾಹುಲ್ ಗಾಂಧಿ(Rahul Gandhi)ಯವರ ಆರೋಪಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ (Kapil Sibal) ಮತ್ತು ಗುಲಾಂ ನಬಿ ಆಜಾದ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಪಕ್ಷದ ಕೆಲವು ನಾಯಕರು ಪತ್ರ ಬರೆದಿರುವ ಬಗ್ಗೆ ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಬರೆದಿರುವ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. ವಾಸ್ತವವಾಗಿ ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಪತ್ರ ಬರೆಯಲಾಗಿದ್ದು ಪತ್ರದಲ್ಲಿ ಬರೆದಿರುವ ವಿಷಯವನ್ನು ಚರ್ಚಿಸಲು ಕಾರ್ಯಕಾರಿ ಸಮಿತಿ ಸಭೆ ಉತ್ತಮ ವೇದಿಕೆಯೇ ಹೊರತು ಮಾಧ್ಯಮವಲ್ಲ ಎಂದು ರಾಹುಲ್ ಕಿಡಿಕಾರಿದ್ದಾರೆ.

ಸೋನಿಯಾಜಿ ಅನಾರೋಗ್ಯದಿಂದ ಬಳಲುತ್ತಿರುವ ಮತ್ತು ರಾಜಸ್ಥಾನ ಸರ್ಕಾರವನ್ನು ಉಳಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲಿ ಈ ಪತ್ರವನ್ನು ಏಕೆ ಬರೆಯಲಾಗಿದೆ ಎಂದು ಸಿಡಬ್ಲ್ಯುಸಿಯಲ್ಲಿ 23 ನಾಯಕರ ಸಹಿ ಹೊಂದಿದ್ದ ಪತ್ರದ ಬಗ್ಗೆ ರಾಹುಲ್ ಪ್ರಶ್ನಿಸಿದರು.

ರಾಹುಲ್ ಗಾಂಧಿ ಅವರ ಆರೋಪದಿಂದ ಕೋಪಗೊಂಡ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ (Gulam Nabi Azad) ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕೂಡ ರಾಹುಲ್ ಅವರ ಆರೋಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಮತ್ತು ಮೋದಿ ಸರ್ಕಾರದ ವಿರುದ್ಧದ ಮನಸ್ಥಿತಿಯನ್ನು ಲಾಭ ಮಾಡಿಕೊಳ್ಳಲು ಪಕ್ಷಕ್ಕೆ ಸಾಧ್ಯವಿಲ್ಲ ಎಂದು ಪತ್ರ ಬರೆದ 23 ನಾಯಕರಲ್ಲಿ ಆಜಾದ್ ಕೂಡ ಇದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಈ ಕುರಿತಂತೆ ಟ್ವೀಟ್ ಮಾಡಿದ್ದು ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ರಾಜಸ್ಥಾನ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಬಿಜೆಪಿಯನ್ನು ಮಣಿಸಿ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಪರ ಹೇಳಿಕೆ ನೀಡಿಲ್ಲ. ಆದಾಗ್ಯೂ, ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಉಲ್ಲೇಖಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಆದರೆ ನಂತರ ಅವರು ತಮ್ಮ ಟ್ವೀಟ್ ಅನ್ನು ಹಿಂತೆಗೆದುಕೊಂಡರು. ರಾಹುಲ್ ಗಾಂಧಿ ವೈಯಕ್ತಿಕವಾಗಿ ಇಡೀ ವಿಷಯವನ್ನು ಹೇಳಿದ್ದಾರೆ ಎಂದು ಅವರು ಮತ್ತೊಂದು ಟ್ವೀಟ್ ನಲ್ಲಿ ಹೇಳಿದ್ದಾರೆ.

Trending News