ನವದೆಹಲಿ: ಸಂಸತ್ತಿನ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದೆ ಎಂದು ಪಕ್ಷದ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಗುರುವಾರ ತಿಳಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೆ ಇನ್ನೂ ಯಾವುದೇ ಕಾರ್ಯಸೂಚಿಯನ್ನು ನಿರ್ಧರಿಸಲಾಗಿಲ್ಲ ಎಂದು ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಭಾರಿ ಸೋಲು ಮತ್ತು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದೆ. ಮೇ 25ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ 17ನೇ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು.
ಮಾಹಿತಿ: ANI