ನವದೆಹಲಿ: ಜವಾದ್ ಚಂಡಮಾರುತ ಶನಿವಾರ ಉತ್ತರ ಆಂಧ್ರಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿರುವುದರಿಂದ, ರಾಜ್ಯ ಸರ್ಕಾರವು ಮೂರು ಜಿಲ್ಲೆಗಳಿಂದ 54,008 ಜನರನ್ನು ಸ್ಥಳಾಂತರಿಸಿದೆ.
ರಕ್ಷಣಾ ತಂಡವು ಶ್ರೀಕಾಕುಳಂ ಜಿಲ್ಲೆಯಿಂದ 15,755 ಜನರನ್ನು, ವಿಜಯನಗರದಿಂದ 1,700 ಮತ್ತು ವಿಶಾಖಪಟ್ಟಣದಿಂದ 36,553 ಜನರನ್ನು ಸ್ಥಳಾಂತರಿಸಿದೆ.
ಇದನ್ನೂ ಓದಿ : ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯೇ ಇಮ್ರಾನ್ ಖಾನ್ ಬಗ್ಗೆ ಸಿಧು ನೀಡಿದ ಹೇಳಿಕೆ?
ಶಾಲೆಗಳು ಮತ್ತು ಸಮುದಾಯ ಭವನಗಳಲ್ಲಿ ಸರ್ಕಾರ 197 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ (ಎನ್‌ಡಿಆರ್‌ಎಫ್) 11 ತಂಡಗಳನ್ನು ನಿಯೋಜಿಸಲಾಗಿದ್ದು, ರಾಜ್ಯ ವಿಪತ್ತು ಪರಿಹಾರ ದಳದ (ಎಸ್‌ಡಿಆರ್‌ಎಫ್) ಐದು ತಂಡಗಳು ಮತ್ತು ಕೋಸ್ಟ್ ಗಾರ್ಡ್‌ನ ಆರು ತಂಡಗಳು ಸ್ಥಳದಲ್ಲಿವೆ.
ಇದನ್ನೂ ಓದಿ : Viral Video: ಜಿಮ್‌ನಲ್ಲಿ ಗೆಳತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಹೆಂಡತಿಗೆ ಸಿಕ್ಕಿಬಿದ್ದ ಪತಿರಾಯ..!
ಗ್ರಾಮ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳು ರಾತ್ರಿಯಿಡೀ ಕಾರ್ಯನಿರ್ವಹಿಸಲಿದ್ದಾರೆ.ಎರಡು ಹೆಲಿಕಾಪ್ಟರ್‌ಗಳು ಸನ್ನದ್ಧ ಸ್ಥಿತಿಯಲ್ಲಿವೆ. ಯಾವುದೇ ಅನಿರೀಕ್ಷಿತ ಪರಿಸ್ಥಿತಿ ಎದುರಿಸಲು ₹ 1 ಕೋಟಿ ಬಿಡುಗಡೆ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ