ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಸೈಕ್ಲೋನ್ 'ಓಖಿ' ಎಚ್ಚರಿಕೆ

ತಮಿಳು ನಾಡು ಮತ್ತು ಕೇರಳ ರಾಜ್ಯಗಳಲ್ಲಿ ಒಕ್ಹಿ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ.

Last Updated : Nov 30, 2017, 05:56 PM IST
ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಸೈಕ್ಲೋನ್ 'ಓಖಿ' ಎಚ್ಚರಿಕೆ title=

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದ ಉಂಟಾದ ಓಖಿ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಪರಿಣಮಿಸುವ ಸಾಧ್ಯತೆ ಇರುವಂತೆಯೇ ತಮಿಳು ನಾಡು ಮತ್ತು ಕೇರಳ ರಾಜ್ಯಗಳಲ್ಲಿ ಚಂಡಮಾರುತದ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ (IMD), ಕೊಮೊರಿನ್ ಪ್ರದೇಶದ ಮೇಲೆ ತೀರದಿಂದ  ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ 38 ಕಿ.ಮೀ. ವೇಗದಲ್ಲಿ ಓಖಿ ಚಂಡಮಾರುತ ಬೀಸುತ್ತಿದ್ದು  ಅದರ ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ತಮಿಳುನಾಡು ಮತ್ತು ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.

ಐಎಂಡಿಯ ಪ್ರಕಾರ, ಗಂಟೆಗೆ 75 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಲಕ್ಷದ್ವೀಪದಲ್ಲಿ ಭಾರಿ ಮಳೆ ಆಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ. 

ಕೇರಳ ಮತ್ತು ತಮಿಳುನಾಡು ರಾಜ್ಯಗಳ ದಕ್ಷಿಣ ಜಿಲ್ಲೆಗಳಲ್ಲಿ ಜನರು ಸಾಧ್ಯವಾದಷ್ಟು ಸಮುದ್ರ ತೀರಗಳಿಂದ ದೂರವಿರಲು ಸೂಚನೆ ನೀಡಲಾಗಿದ್ದು, ಮೀನುಗಾರು ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಚಂಡಮಾರುತ ಮುನ್ಸೂಚನೆ  ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಇಲಾಖೆ 12 ರೈಲುಗಳ ಸಂಚಾರ ರದ್ದುಗೊಳಿಸಿದೆ.

Trending News