ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಮಧ್ಯಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

                   

Last Updated : Nov 27, 2017, 11:51 AM IST
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಮಧ್ಯಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ title=

ಭೂಪಾಲ್: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರದಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲು ರೇಪಿಸ್ಟ್ ಗಳಿಗೆ ಗಲ್ಲುಶಿಕ್ಷೆ ವಿಧಿಸುವಂತಹ  ಮಹತ್ವದ ನಿರ್ಧಾರವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರ ಕೈಗೊಂಡಿದೆ.

ಮಧ್ಯಪ್ರದೇಶ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಧ್ಯಪ್ರದೇಶದಲ್ಲಿ 12 ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಮುಗ್ಧ ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಗಲ್ಲುಶಿಕ್ಷೆ ಅನುಭವಿಸಬೇಕಾಗುತ್ತದೆ. 

ನ. 5 ರಂದು 12 ವರ್ಷದ ಬಾಲಕಿಯ ಮೇಲೆ ಕೆಲ ದುಷ್ಕರ್ಮಿಗಳು ಅತ್ಯಾಚಾರವೆಸಗಿ ಆಕೆಯ ಸಾವಿಗೆ ಕಾರಣರಾಗಿದ್ದರು. ಆ ಘಟನೆಗೆ ಸಂಬಂಧಿಸಿದ ಆರೋಪಿಗಳಿಗೂ ಕೂಡ ಗಲ್ಲುಶಿಕ್ಷೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ. ಅದಲ್ಲದೆ ಕಳೆದ ತಿಂಗಳು ಐಎಎಸ್ ಆಕಾಂಕ್ಷಿ ಮೇಲೆ ನಡೆದಿರುವಂತಹ ಅತ್ಯಾಚಾರ, ವಿಕಲಚೇತನ ಬಾಲಕಿಯ ಮೇಲೆ ನಡೆದಿರುವಂತಹ ಅತ್ಯಾಚಾರಕ್ಕೆ ಕಾರಣವಾದ ಆರೋಪಿಗಳಿಗೂ ಈ ಶಿಕ್ಷೆ ನೀಡುವಂತಹ ಸಾಧ್ಯತೆ ಇದೆ. 

Trending News