ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲು

ಮೊನ್ನೆ ಮೊನ್ನೆಯಷ್ಟೇ, ಬುಧವಾರ (ಜುಲೈ 10) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜನಾಥ್ ಸಿಂಗ್ (Rajnath Singh), ಮೋದಿ ಕ್ಯಾಬಿನೆಟ್ ನಲ್ಲಿ 2014ರಿಂದಲೂ ಕೇಂದ್ರ ಸಚಿವರಾಗಿದ್ದಾರೆ.   

Written by - Prashobh Devanahalli | Last Updated : Jul 12, 2024, 07:45 AM IST
  • ರಾಜನಾಥ್ ಸಿಂಗ್ 1977-1980 ಮತ್ತು 2001-2003ರಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು.
  • ಅವರು 1991 ರಿಂದ 1992 ರವರೆಗೆ ಉತ್ತರ ಪ್ರದೇಶ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು.
  • 1999 ರಿಂದ 2000 ರವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮೇಲ್ಮೈ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ದಾಖಲು  title=

ನವ ದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ನಿನ್ನೆ (ಗುರುವಾರ) ಬೆನ್ನು ನೋವಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ  ದಾಖಲು ಮಾಡಲಾಗಿದೆ. 

ಏಮ್ಸ್ ಆಸ್ಪತ್ರೆ (AIIMS Hospital) ವತಿಯಿಂದ ಈ ಕುರಿತಂತೆ ಪತ್ರಿಕಾ ಹೇಳಿಕೆ ಹೊರಡಿಸಲಾಗಿದ್ದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defence Minister Rajnath Singh) ಅವರ  ಆರೋಗ್ಯ ಸ್ಥಿರವಾಗಿದ್ದು ಸದ್ಯ ವೈದ್ಯರು ಅವರ ಬೆನ್ನು ನೋವಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿಸಲಾಗಿದೆ. 

ಇದನ್ನೂ ಓದಿ- ಅಗ್ನಿವೀರರಿಗೆ ಗುಡ್ ನ್ಯೂಸ್: CISF ನಲ್ಲಿ ಶೇ 10% ಮೀಸಲಾತಿ ಘೋಷಣೆ

ಮೊನ್ನೆ ಮೊನ್ನೆಯಷ್ಟೇ, ಬುಧವಾರ (ಜುಲೈ 10) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜನಾಥ್ ಸಿಂಗ್ (Rajnath Singh), ಮೋದಿ ಕ್ಯಾಬಿನೆಟ್ ನಲ್ಲಿ 2014ರಿಂದಲೂ ಕೇಂದ್ರ ಸಚಿವರಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲೂ ಲಕ್ನೋ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗುವ ಮೂಲಕ ಸತತ ಎರಡನೇ ಬಾರಿಗೆ ರಕ್ಷಣಾ ಸಚಿವರಾಗಿದ್ದಾರೆ.  

ಇದನ್ನೂ ಓದಿ- ಒಂದು ವರ್ಷದಲ್ಲಿ ಭಾರತದ ಪೌರತ್ವ ತ್ಯಜಿಸಿದವರ ಸಂಖ್ಯೆ ದ್ವಿಗುಣ! ವಿದೇಶವನ್ನೇ ಇಷ್ಟಪಡ್ತಿರೋದೇಕೆ ಭಾರತೀಯರು?

ರಾಜನಾಥ್ ಸಿಂಗ್ 1977-1980 ಮತ್ತು 2001-2003ರಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು.  ಅವರು 1991 ರಿಂದ 1992 ರವರೆಗೆ ಉತ್ತರ ಪ್ರದೇಶ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು, 1999 ರಿಂದ 2000 ರವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮೇಲ್ಮೈ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದರು. ನಂತರ 2000-2002ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.  2003ರಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.  2009 ರಲ್ಲಿ ಅವರು 15ನೇ ಲೋಕಸಭೆಗೆ ಆಯ್ಕೆಯಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News