ನವದೆಹಲಿ : ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರು ಬಳಿ ಬುಧವಾರ ಪತನಗೊಂಡಿದೆ. ಈ ಹೆಲಿಕಾಪ್ಟರ್‌ನಲ್ಲಿ ಸಿಡಿಎಸ್ ಜನರಲ್ ಬಿಪಿನ್ (Bipin Rawat) ರಾವತ್ ಕೂಡ ಪ್ರಯಾಣಿಸುತ್ತಿದ್ದರು. ಮೂಲಗಳ ಪ್ರಕಾರ, ಅಪಘಾತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಅಪಘಾತದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸಿಡಿಎಸ್ ಬಿಪಿನ್ ರಾವತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ನಾಳೆ ಸಂಸತ್ತಿನಲ್ಲಿ ಹೇಳಿಕೆ ನೀಡಲಿರುವ ರಕ್ಷಣಾ ಸಚಿವ :
ಜನರಲ್ ರಾವತ್ (Bipin Rawat) ಅವರ ಆರೋಗ್ಯ ಸ್ಥಿತಿಯ ಮಾಹಿತಿ ನೀಡಲಾಗಿಲ್ಲ. ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವಾಯುಪಡೆ ತಿಳಿಸಿದೆ. IAF ನ Mi-17VH ಹೆಲಿಕಾಪ್ಟರ್ ಪತನಗೊಂಡಿದ್ದು (Military Helicopter Crash), ಹೆಲಿಕಾಪ್ಟರ್ ಕೊಯಮತ್ತೂರು ಬಳಿಯ ಸುಲೂರ್ ಏರ್ ಫೋರ್ಸ್ ಬೇಸ್ ನಿಂದ ಹೊರಟಿತ್ತು. ಅಪಘಾತದ ಬಗ್ಗೆ ರಕ್ಷಣಾ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ನಾಳೆ ಸಂಸತ್ತಿನಲ್ಲಿ ಈ ಅಪಘಾತದ ಬಗ್ಗೆ ಹೇಳಿಕೆ ನೀಡಲಿದ್ದಾರೆ.
ಇದನ್ನೂ ಓದಿ : ರೈತರಗೆ ಸಿಹಿ ಸುದ್ದಿ : ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಿಗಲಿದೆ ಶೇ.50 ರಷ್ಟು ಸಬ್ಸಿಡಿ!
ಎಲ್ಲಾ ಗಾಯಾಳುಗಳ ಸ್ಥಳಾಂತರ :
ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ ಗಾಯಾಳುಗಳನ್ನು ಅಪಘಾತದ ಸ್ಥಳದಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್ ಪತನಗೊಂಡಾಗ ಸಿಡಿಎಸ್ ಜನರಲ್ ರಾವತ್, ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ ತೆರಳುತ್ತಿದ್ದರು. ಈ ಮಧ್ಯೆ, ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮತ್ತು ಮೂವರನ್ನು ರಕ್ಷಿಸಲಾಗಿದೆ ಎಂದು ಕೊಯಮತ್ತೂರಿನ ಅಧಿಕೃತ ಮೂಲಗಳು ತಿಳಿಸಿವೆ. ನೀಲಗಿರಿ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಕೂನೂರು ಬಳಿಯ ನಂಜಪ್ಪನಛತ್ರಂ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
#WATCH | Latest visuals from military chopper crash site in Tamil Nadu.
CDS Gen Bipin Rawat, his staff and some family members were on board chopper. pic.twitter.com/H3ewiYlVMU
— ANI (@ANI) December 8, 2021
ಭಾರತೀಯ ವಾಯುಪಡೆ ಮುಖ್ಯಸ್ಥ ವಿಆರ್ ಚೌಧರಿ (VR Choudary), ಕೂನೂರಿನಲ್ಲಿ ಅಪಘಾತ ಸ್ಥಳಕ್ಕೆ ತೆರಳಿದ್ದಾರೆ. ಇದಲ್ಲದೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (MK Stalin) ಕೂಡ ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಇದನ್ನೂ ಓದಿ : Mi-17V-5 ಮಿಲಿಟರಿ ಚಾಪರ್ ಪತನ: ರಷ್ಯಾ ನಿರ್ಮಿತ ಹೆಲಿಕಾಪ್ಟರ್ ಬಗ್ಗೆ ತಿಳಿದುಕೊಳ್ಳ ಬೇಕಾದ ಅಂಶಗಳು
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ