AAP Government: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಕದ ತಟ್ಟಿದ ಆಮ್ ಆದ್ಮಿ ಪಕ್ಷ, ಇದು ಅಸಂವಿಧಾನಿಕ ಎಂದ ಪಕ್ಷ

AAP Government Approaches Supreme Court: ಅರವಿಂದ್ ಕೇಜ್ರಿವಾಲ್ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರದ ಸುಗ್ರೀವಾಜ್ಞೆ ಅಸಾಂವಿಧಾನಿಕವಾಗಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಕೋರಲಾಗಿದೆ.  

Written by - Nitin Tabib | Last Updated : Jun 30, 2023, 06:22 PM IST
  • ಜುಲೈ 3 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವರು ಮತ್ತು ಎಲ್ಲಾ ಶಾಸಕರು
  • ಈ ಕರಾಳ ಸುಗ್ರೀವಾಜ್ಞೆಯ ಪ್ರತಿಗಳನ್ನು ಐಟಿಒನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುಡಲಿದ್ದಾರೆ.
  • ಇದಾದ ಬಳಿಕ ಜುಲೈ 5ರಂದು ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆ ಪ್ರತಿಯನ್ನು ಸುಡಲಾಗುವುದು.
  • ಜುಲೈ 6 ಮತ್ತು ಜುಲೈ 13 ರ ನಡುವೆ, ದೆಹಲಿಯ ಪ್ರತಿಯೊಂದು ಮೂಲೆ, ವೃತ್ತ, ರಸ್ತೆ ವಿಭಜಕ ಮತ್ತು ಗಲ್ಲಿಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಾಗುವುದು ಎನ್ನಲಾಗಿದೆ.
AAP Government: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಕದ ತಟ್ಟಿದ ಆಮ್ ಆದ್ಮಿ ಪಕ್ಷ, ಇದು ಅಸಂವಿಧಾನಿಕ ಎಂದ ಪಕ್ಷ title=

AAP Approaches SC: ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ಕುರಿತು ದೆಹಲಿಯ ಆಮ್ ಆದ್ಮಿ ಪಕ್ಷ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರದ ಸುಗ್ರೀವಾಜ್ಞೆ ಅಸಾಂವಿಧಾನಿಕವಾಗಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಹೇಳಲಾಗಿದೆ.
 
ಇದಕ್ಕೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜುಲೈ 3 ರಂದು ದೆಹಲಿಯಲ್ಲಿರುವ ತಮ್ಮ ಪಕ್ಷದ  ಕೇಂದ್ರ ಕಚೇರಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವುದಾಗಿ ಘೋಷಿಸಿದ್ದರು. ಬಳಿಕ ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಾಗುವುದು ಎಂದು ಆಮ್ ಆದ್ಮಿ ಪಕ್ಷದ ವಕ್ತಾರ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
 
ಜುಲೈ 3 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವರು ಮತ್ತು ಎಲ್ಲಾ ಶಾಸಕರು ಈ ಕರಾಳ  ಸುಗ್ರೀವಾಜ್ಞೆಯ ಪ್ರತಿಗಳನ್ನು ಐಟಿಒನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುಡಲಿದ್ದಾರೆ. ಇದಾದ ಬಳಿಕ ಜುಲೈ 5ರಂದು ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆ ಪ್ರತಿಯನ್ನು ಸುಡಲಾಗುವುದು. ಜುಲೈ 6 ಮತ್ತು ಜುಲೈ 13 ರ ನಡುವೆ, ದೆಹಲಿಯ ಪ್ರತಿಯೊಂದು ಮೂಲೆ, ವೃತ್ತ, ರಸ್ತೆ ವಿಭಜಕ ಮತ್ತು ಗಲ್ಲಿಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಾಗುವುದು ಎನ್ನಲಾಗಿದೆ.
 
ದೆಹಲಿಯ ಪ್ರತಿ ಪ್ರದೇಶದಲ್ಲಿ ಪ್ರತಿಗಳನ್ನು ಸುಡುವುದನ್ನು ಎಲ್ಲಾ 7 ಉಪಾಧ್ಯಕ್ಷರು ಖಚಿತಪಡಿಸಿಕೊಳ್ಳಲಿದ್ದಾರೆ ಎಂದು ದೆಹಲಿ ಸರ್ಕಾರದ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಈ ಕರಾಳ ಸುಗ್ರೀವಾಜ್ಞೆ ಮೂಲಕ ದೆಹಲಿಯನ್ನು ಅಕ್ರಮವಾಗಿ ನಿಯಂತ್ರಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಉಪಾಧ್ಯಕ್ಷರಾದ ದಿಲೀಪ್ ಪಾಂಡೆ, ಜರ್ನೈಲ್ ಸಿಂಗ್, ಗುಲಾಬ್ ಸಿಂಗ್, ಜಿತೇಂದ್ರ ತೋಮರ್, ರಿತುರಾಜ್ ಝಾ, ರಾಜೇಶ್ ಗುಪ್ತಾ ಮತ್ತು ಕುಲದೀಪ್ ಕುಮಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ-UCC Update: ಏಕರೂಪ ನಾಗರಿಕ ಸಂಹಿತೆ ವಿಷಯದಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಶಿವಸೇನೆ! ಸಂಸತ್ತಿನಲ್ಲಿ ಬೆಂಬಲ ನೀಡುತ್ತಾ?
 
ಪಕ್ಷವು ಜೂನ್ 11 ರಂದು ಸುಗ್ರೀವಾಜ್ಞೆಯ ವಿರುದ್ಧ ರ್ಯಾಲಿಯನ್ನು ಸಹ ಆಯೋಜಿಸಿತ್ತು. ದೆಹಲಿಯಲ್ಲಿ ಐಎಎಸ್ ಮತ್ತು ಇತರ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಅನ್ನು ಅನುಮೋದಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರವು ಅಂಗೀಕರಿಸಿದೆ ಎಂಬುದು ಇಲ್ಲಿ ಉಲ್ಲೇಖನೀಯ, ಇದನ್ನು ಸೇವೆಗಳ ನಿಯಂತ್ರಣದ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಹತ್ತಿಕ್ಕುವ ಸುಗ್ರೀವಾಜ್ಞೆ ಎಂದು ಆಪ್ ಪಕ್ಷವು ಬಣ್ಣಿಸಿದೆ.

ಇದನ್ನೂ ಓದಿ-Uttarakhand UCC: ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರತಿ ಸಿದ್ಧ, ತಜ್ಞರ ಸಮಿತಿಯಿಂದ ಘೋಷಣೆ
 
ದೆಹಲಿಯಲ್ಲಿ ಸೇವೆಗಳ ನಿಯಂತ್ರಣವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸುವ ನಿರ್ಧಾರದ ಒಂದು ವಾರದ ನಂತರ ಸುಗ್ರೀವಾಜ್ಞೆಯನ್ನು ಅಂಗೀಕರಿಸಲಾಗಿದೆ. ಈ ನಿರ್ಧಾರದಲ್ಲಿ, ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಗೆ ಸಂಬಂಧಿಸಿದ ವಿಷಯಗಳನ್ನು ಹೊರಗಿಡಲಾಗಿದೆ. ಚುನಾಯಿತ ಸರ್ಕಾರವು ಗ್ರೂಪ್ ಎ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮತ್ತು ಅವರ ವಿರುದ್ಧ ಶಿಸ್ತು ಕ್ರಮಕ್ಕಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲು ಕೋರಿತ್ತು.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News