ದೆಹಲಿಯಲ್ಲಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್

200 ಯುನಿಟ್‌ವರೆಗಿನ ವಿದ್ಯುತ್ ಬಳಕೆಗೆ ಜನರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಮತ್ತು ಆಗಸ್ಟ್ 1 ರಿಂದ ಅವರ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Last Updated : Aug 1, 2019, 02:20 PM IST
ದೆಹಲಿಯಲ್ಲಿ 200 ಯುನಿಟ್‌ವರೆಗೆ ಉಚಿತ ವಿದ್ಯುತ್  title=

ನವದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ 200 ಯುನಿಟ್‌ವರೆಗಿನ ವಿದ್ಯುತ್ ಬಳಕೆಗೆ ಜನರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಪ್ರಕಟಿಸಿದ್ದಾರೆ.

"200 ಯುನಿಟ್‌ವರೆಗಿನ ವಿದ್ಯುತ್ ಬಳಕೆಗೆ ಜನರು ವಿದ್ಯುತ್ ಬಿಲ್ ಪಾವತಿಸಬೇಕಾಗಿಲ್ಲ. ಆಗಸ್ಟ್ 1 ರಿಂದ ಅವರ ಬಿಲ್‌ಗಳನ್ನು ಮನ್ನಾ ಮಾಡಲಾಗುತ್ತದೆ" ಎಂದು ಅವರು ಹೇಳಿದರು.

ಆದರೆ ಗ್ರಾಹಕರು 201 ಯುನಿಟ್‌ ಬಳಸಿದರೆ, "ಅವರು ಸಂಪೂರ್ಣ ಶುಲ್ಕವನ್ನು ಪಾವತಿಸಬೇಕಾಗುತ್ತದೆ" ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

"201 ರಿಂದ 400 ಯುನಿಟ್ ನಡುವಿನ ವಿದ್ಯುತ್ ಬಳಕೆಗಾಗಿ, ಶೇಕಡಾ 50 ರಷ್ಟು ಸಬ್ಸಿಡಿ ನೀಡಲಾಗುವುದು" ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ.

ಉನ್ನತ ಅಧಿಕಾರಿಗಳು ಮತ್ತು ಸರ್ಕಾರಿ ಉದ್ಯೋಗಿಗಳು ಉಚಿತ ವಿದ್ಯುತ್ ಪಡೆಯುತ್ತಿರುವಾಗ ಸಾಮಾನ್ಯ ಜನರಿಗೂ ಸಹ ಈ ಸೌಲಭ್ಯ ಸಿಗಬೇಕು. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Trending News