Delhi Politics: ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭೇಟಿಯಾದ ಅರವಿಂದ್ ಕೆಜ್ರೀವಾಲ್

CM Kejriwal Meets CM Stalin: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷ ನಾಯಕರನ್ನು ನಿರಂತರವಾಗಿ ಭೇಟಿ ನಡೆಸಿ ಮಾತುಕತೆ ನಡೆಸುತ್ತಿದ್ದಾರೆ ಮತ್ತು ಬೆಂಬಲವನ್ನು ಕೋರುತ್ತಿದ್ದಾರೆ.  

Written by - Nitin Tabib | Last Updated : Jun 1, 2023, 06:32 PM IST
  • ಇದಕ್ಕೂ ಮುನ್ನ ಕೇಜ್ರಿವಾಲ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್,
  • ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದಾರೆ.
  • ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ, ಈ ಎಲ್ಲಾ ನಾಯಕರು ಕೇಜ್ರಿವಾಲ್ ಅವರನ್ನು ಬೆಂಬಲಿಸಿದ್ದಾರೆ ಮತ್ತು ನಾವು ರಾಜ್ಯಸಭೆಯಲ್ಲಿ ಅದರ ವಿರುದ್ಧ ಮತ ಚಲಾಯಿಸುತ್ತೇವೆ ಎಂದು ಹೇಳಿದ್ದಾರೆ.
Delhi Politics: ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭೇಟಿಯಾದ ಅರವಿಂದ್ ಕೆಜ್ರೀವಾಲ್ title=
ಚಿತ್ರ ಕೃಪೆ - ಎಎನ್ಐ

Central Government Ordinance: ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರತರಾಗಿದ್ದಾರೆ. ಏತನ್ಮಧ್ಯೆ, ಕೇಜ್ರಿವಾಲ್ ಇಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್, ಎಎಪಿ ನಾಯಕ ರಾಘವ್ ಚಡ್ಡಾ ಮತ್ತು ದೆಹಲಿ ಸರ್ಕಾರದ ಸಚಿವ ಅತಿಶಿ ಕೂಡ ಉಪಸ್ಥಿತರಿದ್ದರು.

ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸುಗ್ರೀವಾಜ್ಞೆಯನ್ನು ನಿರಂತರವಾಗಿ ಸಂವಿಧಾನ ವಿರೋಧಿ ಎಂದು ಕರೆಯುತ್ತಿದ್ದಾರೆ. ಇದಕ್ಕೂ ಮೊದಲು ಕೇಂದ್ರದ ಅಸಂವಿಧಾನಿಕ-ಪ್ರಜಾಪ್ರಭುತ್ವ ವಿರೋಧಿ 'ದೆಹಲಿ ವಿರೋಧಿ' ಸುಗ್ರೀವಾಜ್ಞೆಯ ವಿರುದ್ಧ ಡಿಎಂಕೆ ಬೆಂಬಲ ಪಡೆಯಲು ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗುವುದಾಗಿ ಅವರು ಬುಧವಾರ ಟ್ವೀಟ್ ಮಾಡಿದ್ದರು. ಇದಲ್ಲದೆ ಶುಕ್ರವಾರ ಜೂನ್ 2 ರಂದು ರಾಂಚಿಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಭೇಟಿಯಾಗುವುದಾಗಿ ಅವರು ಹೇಳಿದ್ದಾರೆ.

ಇದಕ್ಕೂ ಮುನ್ನ ಕೇಜ್ರಿವಾಲ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದಾರೆ. ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ, ಈ ಎಲ್ಲಾ ನಾಯಕರು ಕೇಜ್ರಿವಾಲ್ ಅವರನ್ನು ಬೆಂಬಲಿಸಿದ್ದಾರೆ ಮತ್ತು ನಾವು ರಾಜ್ಯಸಭೆಯಲ್ಲಿ ಅದರ ವಿರುದ್ಧ ಮತ ಚಲಾಯಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ-Indo-Nepal Relation: 'ಬಾರ್ಡರ್ ಬ್ಯಾರಿಯರ್ ಆಗದಿರಲಿ, ನಮ್ಮ ಪಾರ್ಟ್ನರ್ ಶಿಪ್ ಹಿಟ್...' ನೇಪಾಳ ಪ್ರಧಾನಿ ಭೇಟಿಯ ಬಳಿಕ ಪಿಎಂ ಮೋದಿ ಮಾತು

ಸಂಪೂರ್ಣ ವಿಷಯ ಏನು?
ಇತ್ತೀಚೆಗೆ, ದೆಹಲಿಯ ಕೇಜ್ರಿವಾಲ್ ಸರ್ಕಾರಕ್ಕೆ ದೆಹಲಿಯ ಅಧಿಕಾರಿಗಳನ್ನು ಪೋಸ್ಟ್ ಮಾಡುವ ಮತ್ತು ವರ್ಗಾವಣೆ ಮಾಡುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು, ನಂತರ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತರುವ ಮೂಲಕ ಅದನ್ನು ರದ್ದುಗೊಳಿಸಿತ್ತು ಮತ್ತು ದೆಹಲಿ ದೇಶದ ರಾಜಧಾನಿ ಎಂದು ವಾದ ಮಂಡಿಸಿತ್ತು, ಹೇಗಿರುವಾಗ ಪ್ರಕರಣ ಭಾರಿ ಮಹಾರ್ತ್ವ ಪಡೆದುಕೊಂಡಿದೆ. 

ಇದನ್ನೂ ಓದಿ-Stock Market Update: ಸತತ ಎರಡನೇ ದಿನ ಕುಸಿದ ಷೇರು ಮಾರುಕಟ್ಟೆ, 18500 ಕ್ಕಿಂತ ಕೆಳಕ್ಕೆ ಜಾರಿದ ನಿಫ್ಟಿ ಷೇರು ಸೂಚ್ಯಂಕ

ಕೆಜ್ರೀವಾಲ್ ಈ ಭೇಟಿ ಏಕೆ ನಡೆಸುತ್ತಿದ್ದಾರೆ?
ವಿರೋಧ ಪಕ್ಷಗಳ ಬೆಂಬಲ ಪಡೆದುಕೊಂಡರೆ ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆಗೆ ಅಂಗೀಕಾರ ಸಿಗುವುದಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ನಿರೀಕ್ಷಿಸಿದ್ದಾರೆ. ಕಾಂಗ್ರೆಸ್ ಬೆಂಬಲಕ್ಕಾಗಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಕೇಜ್ರಿವಾಲ್ ಸಮಯ ಕೋರಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News