Arvind Kejriwal: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕರೋನಾ ದೃಢ

ತಮಗೆ ಕರೋನಾ ಸೋಂಕು ದೃಢಪಟ್ಟಿರುವುದಾಗಿ ಸ್ವತಃ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

Written by - Zee Kannada News Desk | Last Updated : Jan 4, 2022, 09:01 AM IST
  • ದೆಹಲಿ ಮುಖ್ಯಮಂತ್ರಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೋಂಕು
  • ಈ ಕುರಿತಂತೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
  • ಅವರು ನಿನ್ನೆ (ಸೋಮವಾರ) ತಮ್ಮ ಪಕ್ಷದ ಪ್ರಚಾರಕ್ಕಾಗಿ ಉತ್ತರಾಖಂಡಕ್ಕೆ ತೆರಳಿದ್ದರು
Arvind Kejriwal: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕರೋನಾ ದೃಢ title=
Delhi CM Arvind Kejriwal tested Corona positive

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಇತ್ತೀಚಿಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕ್ವಾರಂಟೈನ್ ನಲ್ಲಿರುವಂತೆಯೂ ಮತ್ತು ಕರೋನಾ ಪರೀಕ್ಷೆಗೆ ಒಳಪಡುವಂತೆ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal), 'ನಾನು ಕೋವಿಡ್ ಪಾಸಿಟಿವ್ ಆಗಿದ್ದೇನೆ. ಸೌಮ್ಯವಾದ ರೋಗಲಕ್ಷಣಗಳಿವೆ. ಮನೆಯಲ್ಲಿ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪ್ರತ್ಯೇಕಿಸಿ ಮತ್ತು ನಿಮ್ಮನ್ನು ಪರೀಕ್ಷಿಸಿಕೊಳ್ಳಿ' ಎಂದಿದ್ದಾರೆ.

ಇದನ್ನೂ ಓದಿ-  Assembly Elections: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಪತ್ರ ಬರೆದು ಮಹತ್ವದ ಸೂಚನೆ ನೀಡಿದ ಚುನಾವಣಾ ಆಯೋಗ

ಈ ವರ್ಷ ಪಂಚರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ  ಮೊನ್ನೆ ಭಾನುವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ ರ್ಯಾಲಿ ನಡೆಸಿದರು. ಅವರು ನಿನ್ನೆ (ಸೋಮವಾರ) ತಮ್ಮ ಪಕ್ಷದ ಪ್ರಚಾರಕ್ಕಾಗಿ ಉತ್ತರಾಖಂಡಕ್ಕೆ ತೆರಳಿದ್ದರು. ಡೆಹ್ರಾಡೂನ್‌ನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ 'ನವಪರಿವಾರಣ್ ಸಭೆ' ಉದ್ದೇಶಿಸಿ ಮಾತನಾಡಿದರು. 

ಗಮನಾರ್ಹವಾಗಿ, ದೆಹಲಿಯಲ್ಲಿ ಕರೋನಾ ಗ್ರಾಫ್ ನಿರಂತರವಾಗಿ ಹೆಚ್ಚುತ್ತಿದೆ. ಸೋಮವಾರ ದೆಹಲಿಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಶೇ.6.76 ರಷ್ಟಿದೆ. ಸೋಮವಾರ, ದೆಹಲಿಯಲ್ಲಿ 4 ಸಾವಿರಕ್ಕೂ ಹೆಚ್ಚು ಹೊಸ ಕರೋನವೈರಸ್ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ 1 ಸಾವಿರದ 509 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂಬುದು ಸಮಾಧಾನಕರ ಸಂಗತಿಯಾಗಿದೆ.

ಇದನ್ನೂ ಓದಿ- Omicron In Karnataka: ಕರುನಾಡಲ್ಲಿ 'ಒಮಿಕ್ರಾನ್' ಅಟ್ಟಹಾಸ..! ಗಡಿಯಲ್ಲಿ ಹೈಅಲರ್ಟ್..!

ಇದಕ್ಕೂ ಮುನ್ನ ಭಾನುವಾರ, ದೆಹಲಿಯಲ್ಲಿ ಕರೋನವೈರಸ್ ಸೋಂಕಿನ ಪ್ರಮಾಣವು 4.5% ಮೀರಿದೆ. ಭಾನುವಾರ, ದೆಹಲಿಯಲ್ಲಿ 3,194 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ, ಇದು ಸುಮಾರು 7 ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ಕರೋನಾ ಪ್ರಕರಣವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News