ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಕೋವಿಡ್ -19 ಪೊಸಿಟಿವ್

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಬುಧವಾರ COVID-19 ಸೋಂಕಿಗೆ ಒಳಗಾಗಿದ್ದಾರೆ.

Last Updated : Jun 17, 2020, 10:37 PM IST
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್  ಗೆ ಕೋವಿಡ್ -19 ಪೊಸಿಟಿವ್ title=

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಬುಧವಾರ COVID-19 ಸೋಂಕಿಗೆ ಒಳಗಾಗಿದ್ದಾರೆ.

ತೀವ್ರ ಜ್ವರದಿಂದಾಗಿ ಅವರನ್ನು ಮಂಗಳವಾರ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಕೊರೊನಾವೈರಸ್ ಪರೀಕ್ಷೆಗೆ ಒಳಪಡಿಸಲಾಯಿತು.ದೆಹಲಿಯ ಆರೋಗ್ಯ ಸಚಿವರನ್ನು ಇಂದು ಮತ್ತೆ ಪರೀಕ್ಷಿಸಲಾಯಿತು.

ಇದನ್ನೂ ಓದಿ: ಆಮ್ ಆದ್ಮಿ ಪಕ್ಷದ ಶಾಸಕಿ ಅತಿಶಿಗೆ ಕೊರೊನಾವೈರಸ್ ಧೃಢ

ಜೈನ್ ಪ್ರಸ್ತುತ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಗಳಿಂದಾಗಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಜೈನ್ ಅವರ ಆಮ್ಲಜನಕದ ಮಟ್ಟವು ಕಡಿಮೆಯಾಗಿದೆ ಮತ್ತು ಜೂನ್ 15 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಇನ್ನೊಂದೆಡೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಅತಿಶಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈಗ ಮನೆಯಲ್ಲಿ ತಮ್ಮನ್ನು ತಾವು ನಿರ್ಬಂಧಿಸಿಕೊಂಡಿದ್ದಾರೆ ಮತ್ತು ಪ್ರೋಟೋಕಾಲ್ ಅನ್ನು ಅನುಸರಿಸುತ್ತಿದ್ದಾರೆ ಎನ್ನಲಾಗಿದೆ.
 

Trending News