ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯ ಅಪರಾಧಿ ಸಜ್ಜನ್ ಕುಮಾರ್ ಶರಣಾಗಲು ಹೆಚ್ಚಿನ ಸಮಯಾವಕಾಶ ಕೋರಿ ಗುರುವಾರ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್ ತಿರಸ್ಕರಿಸಿದೆ.
1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ ಡಿ. 31ರೊಳಗೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿತ್ತು.
1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು.