ಅನರ್ಹಗೊಂಡಿದ್ದ ಎಎಪಿ ಶಾಸಕ ಕಪಿಲ್ ಮಿಶ್ರಾ ಬಿಜೆಪಿಗೆ ಸೇರ್ಪಡೆ

ಬಿಜೆಪಿ ನಾಯಕರಾದ ಮನೋಜ್ ತಿವಾರಿ ಮತ್ತು ವಿಜಯ್ ಗೋಯೆಲ್ ಅವರ ಸಮ್ಮುಖದಲ್ಲಿ ಎಎಪಿ ಮಾಜಿ ಶಾಸಕ ಕಪಿಲ್ ಮಿಶ್ರಾ ಬಿಜೆಪಿಗೆ ಸೇರ್ಪಡೆಗೊಂಡರು.

Last Updated : Aug 17, 2019, 12:57 PM IST
ಅನರ್ಹಗೊಂಡಿದ್ದ ಎಎಪಿ ಶಾಸಕ ಕಪಿಲ್ ಮಿಶ್ರಾ ಬಿಜೆಪಿಗೆ ಸೇರ್ಪಡೆ title=

ನವದೆಹಲಿ: ಆಮ್ ಆದ್ಮಿ ಪಕ್ಷದ ಅನರ್ಹಗೊಂಡಿದ್ದ ಶಾಸಕ ಕಪಿಲ್ ಶರ್ಮಾ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಬಿಜೆಪಿ ನಾಯಕರಾದ ಮನೋಜ್ ತಿವಾರಿ ಮತ್ತು ವಿಜಯ್ ಗೋಯೆಲ್ ಅವರ ಸಮ್ಮುಖದಲ್ಲಿ ಎಎಪಿ ಮಾಜಿ ಶಾಸಕ ಕಪಿಲ್ ಮಿಶ್ರಾ ಬಿಜೆಪಿಗೆ ಸೇರ್ಪಡೆಗೊಂಡರು.

ಆಗಸ್ಟ್ 2 ರಂದು ಮಿಶ್ರಾ ಅವರನ್ನು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ದೆಹಲಿ ವಿಧಾನಸಭೆಯಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು. ಮಿಶ್ರಾ ಅವರು ಕರವಾಲ್ ನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಲೋಕಸಭಾ 2019ರ ಚುನಾವಣೆ ಸಂದರ್ಭದಲ್ಲಿ ಮಿಶ್ರಾ ಅವರು ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದಲ್ಲದೆ, ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕುವಂತೆ ಜನತೆಯಲ್ಲಿ ಮನವಿ ಮಾಡಿದ್ದರು. ಬಳಿಕ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. 

ಸದ್ಯ ದೆಹಲಿ ವಿಧಾನಸಭೆಯಿಂದ ಅನರ್ಹಗೊಂಡಿದ್ದನ್ನು ಪ್ರಶ್ನಿಸಿ ಮಿಶ್ರಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸೆಪ್ಟೆಂಬರ್ 4 ರಂದು ನ್ಯಾಯಾಲಯ ಈ ಅರ್ಜಿ ವಿಚಾರಣೆ ನಡೆಸಲಿದೆ.
 

Trending News