ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ತಿಹಾರ್ ಜೈಲಿನಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ ಅವರು ಇಂದು ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
Congress MP DK Suresh (in file pic) appeared before Enforcement Directorate (ED) in Delhi today. His brother Congress leader DK Shivakumar, who was arrested by ED in a money laundering case is currently in Delhi's Tihar jail. pic.twitter.com/ExUbNkw422
— ANI (@ANI) October 3, 2019
ನವದೆಹಲಿಯ ಸಫ್ತರ್ ಜಂಗ್ ಫ್ಲಾಟ್ ನಲ್ಲಿ ಸಿಕ್ಕಿದ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಅ.7ರ ಒಳಗಾಗಿ ವಿಚಾರಣೆಗ ಹಾಜರಾಗುವಂತೆ ಸೆ.30ರಂದು ಡಿ.ಕೆ.ಸುರೇಶ್ ಅವರಿಗೆ ಇಡಿ ನೋಟಿಸ್ ಜಾರಿಮಾಡಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ.
ಇತ್ತೀಚೆಗಷ್ಟೇ ಡಿಕೆಶಿ ಪುತ್ರಿ ಐಶ್ವರ್ಯ ಅವರನ್ನೂ ಸಹ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಐಶ್ವರ್ಯ ಅವರು ಡಿಕೆ ಸುರೇಶ ಅವರಿಂದ 102 ಕೋಟಿ ರೂ. ಸಾಲ ಪಡೆದಿರುವ ಬಗ್ಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಡಿ ಸುರೇಶ ಅವರಿಗೆ ನೋಟಿಸ್ ಜಾರಿ ಮಾಡಿತ್ತು.
ಮತ್ತೊಂದೆಡೆ, ಈ ಪ್ರಕರಣದಲ್ಲಿ ಮೂರು ವಾರಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿರುವ ನ್ಯಾಯಾಲಯ ಅ.14ರವರೆಗೆ ತಿಹಾರ್ ಜೈಲಿನಲ್ಲೇ ಇರುವಂತಾಗಿದೆ.