ದೇಶ ಆಳಲು ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಅವಕಾಶ ನೀಡಬೇಡಿ: ಕಮಲ್ ಹಾಸನ್

Lok Sabha Election 2024: ದೇಶದಲ್ಲಿ ಪ್ರಜಾಪ್ರಭುತ್ವ ಭಾರೀ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ನಾನು ಕೈಜೋಡಿಸುತ್ತೇನೆ ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ.   

Written by - Puttaraj K Alur | Last Updated : Apr 5, 2024, 04:16 PM IST
  • ದೇಶ ಆಳಲು ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಮತ್ತೊಂದು ಅವಕಾಶ ನೀಡಬೇಡಿ
  • ತಮಿಳುನಾಡು ಜನರಿಗೆ ಮಕ್ಕಳ್ ನೀಧಿ ಮೈಯಂನ ಸ್ಥಾಪಕ ಕಮಲ್ ಹಾಸನ್ ಮನವಿ
  • ಬಿಜೆಪಿ ನೇತೃತ್ವದ NDA ಸರ್ಕಾರ ಸಂಪೂರ್ಣವಾಗಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ
ದೇಶ ಆಳಲು ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಂದು ಅವಕಾಶ ನೀಡಬೇಡಿ: ಕಮಲ್ ಹಾಸನ್ title=
ಮೋದಿ ವಿರುದ್ಧ ಕಮಲ್‌ ಹಾಸನ್‌ ಆಕ್ರೋಶ!

ನವದೆಹಲಿ: ದೇಶವನ್ನು ಆಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಮತ್ತೊಂದು ಅವಕಾಶ ನೀಡಬೇಡಿ ಅಂತಾ ಮಕ್ಕಳ್ ನೀಧಿ ಮೈಯಂ (MNM)ನ ಸ್ಥಾಪಕ ಕಮಲ್ ಹಾಸನ್ ತಮಿಳುನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.   

VCK ಅಧ್ಯಕ್ಷ ಹಾಗೂ 'I.N.D.I.A' ಮೈತ್ರಿಕೂಟದ ಚಿದಂಬರಂ ಲೋಕಸಭಾ ಕ್ಷೇತ್ರ (ಮೀಸಲು)ದ ಅಭ್ಯರ್ಥಿ ತೋಳ್‌ ತಿರುಮಾವಳವನ್ ಪರ ಕಮಲ್ ಹಾಸನ್ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡದ ಅವರು, ಬಿಜೆಪಿ ನೇತೃತ್ವದ NDA ಸಂಪೂರ್ಣವಾಗಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಬಿಜೆಪಿ ಕೂಡ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ದೇಶದ ಪ್ರಜಾಪ್ರಭುತ್ವ ತತ್ವಗಳಿಂದ ಸಂಪೂರ್ಣವಾಗಿ ವಂಚಿತವಾಗಲಿದೆʼ ಎಂದು ಅವರು ಆತಂಕ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ 115 ನೇ ಜನ್ಮ ವಾರ್ಷಿಕೋತ್ಸವ : ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ದೇಶದಲ್ಲಿ ಪ್ರಜಾಪ್ರಭುತ್ವ ಭಾರೀ ಅಪಾಯದಲ್ಲಿದೆ. ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಬಿಜೆಪಿಯ ಕುತಂತ್ರದಿಂದ ದೇಶವನ್ನು ಉಳಿಸಲು ಎಲ್ಲಾ ಜಾತ್ಯತೀತ ಹಾಗೂ ಸಮಾನ ಮನಸ್ಕ ಶಕ್ತಿಗಳೊಂದಿಗೆ ನಾನು ಕೈಜೋಡಿಸುತ್ತೇನೆ ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ.   

25 ವರ್ಷಗಳ ಹಿಂದೆ ತೋಳ್‌ ತಿರುಮಾವಳವನ್ ತಮ್ಮ ಎಲ್ಲಾ ಬದ್ಧತೆಗಳನ್ನು ತ್ಯಜಿಸಿ ಜನರ ಸೇವೆಗಾಗಿ ಸಾರ್ವಜನಿಕ ಬದುಕಿಗೆ ಬಂದರು. ರಾಜಕೀಯದಲ್ಲಿ ಜಾತಿವಾದ ನನ್ನ ಮೊದಲ ಶತ್ರು. ನನ್ನ ಬದುಕು ಹಾಗೂ ಸಿನೆಮಾದಲ್ಲಿ ಜಾತಿಗೆ ಅವಕಾಶವಿಲ್ಲವೆಂದು ಇದೇ ವೇಳೆ ಕಮಲ್‌ ಹಾಸನ್‌ ಹೇಳಿದರು.   

ಇದನ್ನೂ ಓದಿ: Earthquake : ಹಿಮಾಚಲ ಪ್ರದೇಶದ ಚಂಬಾದಲ್ಲಿ 5.3 ತೀವ್ರತೆಯ ಭೂಕಂಪ

ಕೇಂದ್ರ ಸರ್ಕಾರವು ಕಳೆದ 10 ವರ್ಷಗಳಿಂದ ಏನನ್ನೂ ಮಾಡಿಲ್ಲವೆಂದು ಆರೋಪಿಸಿದ ಅವರು, ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ವಿಫಲವಾಗಿದೆ. ಇದಕ್ಕೆ ಬದಲಾಗಿ ರೈತರ ಮೇಲೆ ಜಲ ಪಿರಂಗಿಯನ್ನು ಪ್ರಯೋಗಿಸಿತು, ಅಲ್ಲದೇ ಅವರನ್ನು ತುಂಬಾ ಕೆಟ್ಟದಾಗಿ ನಡೆಸಿಕೊಂಡಿತು. ಭರವಸೆ ನೀಡಿದಂತೆ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವಲ್ಲಿ ಕೂಡ ಬಿಜೆಪಿ ಸರ್ಕಾರವು ವಿಫಲವಾಗಿದೆ. ಮುಂಬರುವ ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಿ ಎಂದು ಕಮಲ್‌ ಹಾಸನ್‌ ಮನವಿ ಮಾಡಿಕೊಂಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News