ಲಕ್ನೋದಿಂದ ದೆಹಲಿಗೆ ಬರುತ್ತಿದ್ದ ಡಬಲ್ ಡೆಕ್ಕರ್ ಬಸ್ ಕಾಲುವೆಗೆ ಬಿದ್ದು 29 ಜನರ ಸಾವು

ಆಗ್ರಾ ಬಳಿ ಸಂಭವಿಸಿದ ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Last Updated : Jul 8, 2019, 08:31 AM IST
ಲಕ್ನೋದಿಂದ ದೆಹಲಿಗೆ ಬರುತ್ತಿದ್ದ ಡಬಲ್ ಡೆಕ್ಕರ್ ಬಸ್ ಕಾಲುವೆಗೆ ಬಿದ್ದು 29 ಜನರ ಸಾವು title=

ನವದೆಹಲಿ: ಲಕ್ನೋದಿಂದ ದೆಹಲಿಗೆ ಬರುತ್ತಿದ್ದ ಡಬಲ್ ಡೆಕ್ಕರ್ ಬಸ್ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯ ಕಾಲುವೆಗೆ ಬಿದ್ದು ಕನಿಷ್ಠ 29 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ.

ದೆಹಲಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ವೇಯಲ್ಲಿ ಆಗ್ರಾ ಬಳಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಲಕ್ನೋದಿಂದ ದೆಹಲಿ ಕಡೆ ಬರುತ್ತಿದ್ದ ಡಬಲ್ ಡೆಕ್ಕರ್ ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು, ಅವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬಸ್ ಅಪಘಾತ ಕಂಡ ಸ್ಥಳೀಯರು ಪ್ರಯಾಣಿಕರನ್ನು ಹೊರತೆಗೆಯಲು ಸ್ಥಳಕ್ಕೆ ಧಾವಿಸಿದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಆಡಳಿತವೂ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಆಗ್ರಾ ಬಳಿ ಸಂಭವಿಸಿದ ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸಾರಿಗೆ ಸಂಸ್ಥೆ ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ ಎಂದು ಮೂಲಗಳು ತಿಳಿಸಿವೆ.
 

Trending News