ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬೆಳಗ್ಗೆ 10.15ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಸಂದರ್ಭದಲ್ಲಿ 21 ಬಂದೂಕುಗಳ ಗೌರವ ವಂದನೆ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರದ ಬಳಿಕ ರಾಷ್ಟ್ರಪತಿಗಳ ಭಾಷಣ ಮಾಡಲಿದ್ದಾರೆ.
ಇದನ್ನೂ ಓದಿ: ಮುಂದಿನ 119 ದಿನಗಳವರೆಗೆ ಈ ಎರಡು ರಾಶಿಯವರ ಸಂಕಷ್ಟ ಹೆಚ್ಚಿಸಲಿದ್ದಾನೆ ವಕ್ರೀ ಗುರು
ದ್ರೌಪದಿ ಮುರ್ಮು ಅವರು ದೇಶದ ಮೊದಲ ಮಹಿಳಾ ಬುಡಕಟ್ಟು ಅಧ್ಯಕ್ಷರಾಗಿದ್ದಾರೆ. ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಚುನಾಯಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಸಮಾರಂಭಕ್ಕೂ ಮುನ್ನ ಸಂಸತ್ತನ್ನು ತಲುಪಲಿದ್ದಾರೆ.
ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಂತ್ರಿ ಮಂಡಳಿಯ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜತಾಂತ್ರಿಕ ನಿಯೋಗಗಳ ಮುಖ್ಯಸ್ಥರು, ಸಂಸತ್ತಿನ ಸದಸ್ಯರು, ಸರ್ಕಾರಿ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳ ಮುಖ್ಯಸ್ಥರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆಯುವ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು 'ರಾಷ್ಟ್ರಪತಿ ಭವನ'ಕ್ಕೆ ತೆರಳಲಿದರೆ, ಇಂಟರ್ ಸರ್ವೀಸ್ ಗಾರ್ಡ್ ಆಫ್ ಆನರ್' ನೀಡಿ ನಿರ್ಗಮಿಸುವ ರಾಷ್ಟ್ರಪತಿಗಳಿಗೆ ಗೌರವ ವಂದನೆ ಸಲ್ಲಿಸಲಾಗುತ್ತದೆ.
ಇದನ್ನೂ ಓದಿ: ಇದಪ್ಪಾ ನಿಜವಾದ ವಿದ್ಯೆ ಅಂದ್ರೆ! ಈ ಶಾಲೆಯ ವಿದ್ಯಾಭ್ಯಾಸದ ಪದ್ಧತಿಗೆ ಪೋಷಕರು ಫಿದಾ
ಈಗಾಗಲೇ ದ್ರೌಪದಿ ಮುರ್ಮು ಅವರು ರಾಜ್ ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ವಂದನೆಯನ್ನು ಸಲ್ಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.