Israel-Hamas War : ಪ್ಯಾಲೆಸ್ಟೈನ್‌ಗೆ ವೈದ್ಯಕೀಯ ನೆರವು, ಉಪಯುಕ್ತ ಸಾಮಗ್ರಿ ಕಳುಹಿಸಿದ ಭಾರತ

Israel-Hamas War latest update : ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಬಾಧಿತರಾದ ಪ್ಯಾಲೆಸ್ಟೈನ್‌ ನಾಗರಿಕರಿಗೆ ಭಾರತ ನೆರವಿಗೆ ನಿಂತಿದೆ. 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳ ಪ್ಯಾಲೆಸ್ತೀನ್‌ಗೆ ಕಳುಹಿಸಿದೆ.

Written by - Krishna N K | Last Updated : Oct 22, 2023, 01:47 PM IST
  • ಹಮಾಸ್ ಮೇಲೆ ಇಸ್ರೇಲಿ ವೈಮಾನಿಕ ದಾಳಿ ಮುಂದುವರೆದಿದೆ.
  • ಯುದ್ಧದ ಭೀಕರತೆಗೆ ಪ್ಯಾಲೆಸ್ತೀನ್‌ ಜನರು ನಲುಗಿ ಹೋಗಿದ್ದಾರೆ.
  • ಪ್ಯಾಲೆಸ್ಟೈನ್‌ ನಾಗರಿಕರಿಗೆ ಭಾರತ ನೆರವಿಗೆ ನಿಂತಿದೆ.
Israel-Hamas War : ಪ್ಯಾಲೆಸ್ಟೈನ್‌ಗೆ ವೈದ್ಯಕೀಯ ನೆರವು, ಉಪಯುಕ್ತ ಸಾಮಗ್ರಿ ಕಳುಹಿಸಿದ ಭಾರತ title=

ಹೊಸದಿಲ್ಲಿ: ಗಾಜಾ ಪಟ್ಟಿಯಲ್ಲಿರುವ ಹಮಾಸ್ ಮೇಲೆ ಇಸ್ರೇಲಿ ವೈಮಾನಿಕ ದಾಳಿ ಮುಂದುವರೆದಿದೆ. ಯುದ್ಧದ ಭೀಕರತೆಗೆ ಪ್ಯಾಲೆಸ್ತೀನ್‌ ಜನರು ನಲುಗಿ ಹೋಗಿದ್ದಾರೆ. ಹೀಗಾಗಿ ಅಲ್ಲಿನ ಸಂತ್ರಸ್ತರಿಗೆ ಭಾರತವು ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸುತ್ತಿದೆ. ಅವಶ್ಯಕ ವಸ್ತುಗಳನ್ನು ಹೊತ್ತ ಭಾರತೀಯ ವಾಯುಪಡೆಯ ಸರಕು ವಿಮಾನವು ಭಾನುವಾರ ಈಜಿಪ್ಟ್‌ಗೆ ಹೊರಟಿದೆ.

ಹೌದು.. ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಬಾಧಿತರಾದ ಪ್ಯಾಲೆಸ್ಟೈನ್‌ ನಾಗರಿಕರ ನೆರವಿಗೆ ಭಾರತ ನಿಂತಿದೆ. ಈ ನಿಟ್ಟಿನಲ್ಲಿ ಕೆಲವು ಅವಶ್ಯಕ ವೈದ್ಯಕೀಯ ಮತ್ತು ಉಪಯುಕ್ತ ಸಾಮಾಗ್ರಿಗಳನ್ನು ಕಳುಹಿಸುತ್ತಿದೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅರಿಂದಮ್ ಬಾಗ್ಚಿ ತಮ್ಮ X ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 500 ಜನ ಆಶ್ರಯ ಪಡೆದಿದ್ದ ಗಾಜಾದ 900 ವರ್ಷ ಹಳೆಯ ಚರ್ಚ್ ಮೇಲೆ ಇಸ್ರೇಲ್ ಬಾಂಬ್ ದಾಳಿ..!

ಭಾರತವು ಪ್ಯಾಲೆಸ್ಟೈನ್ ಜನರ ನೆರವಿಗೆ ಮುಂದಾಗಿದೆ. ಅಲ್ಲಿನ ಜನರಿಗಾಗಿ ಸುಮಾರು 6.5 ಟನ್ ವೈದ್ಯಕೀಯ ನೆರವು ಮತ್ತು 32 ಟನ್ ವಿಪತ್ತು ಪರಿಹಾರ ಸಾಮಗ್ರಿಗಳನ್ನು ಹೊತ್ತ IAF C-17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಟಿದೆ. ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್‌ಗಳು, ಮಲಗುವ ಚೀಲಗಳು, ಟಾರ್ಪೌಲಿನ್‌ಗಳು, ನೈರ್ಮಲ್ಯ ಉಪಯುಕ್ತತೆಗಳು, ನೀರು ಶುದ್ಧೀಕರಣ ಮಾತ್ರೆಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಕಳುಹಿಸುತ್ತಿದೆ ಎಂದು ಅರಿಂದಮ್‌ ಭಾಗ್ಚಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿ, ಗಾಜಾದಲ್ಲಿನ ಆಸ್ಪತ್ರೆಯ ಮೇಲೆ ಇತ್ತೀಚೆಗೆ ನಡೆದ ವೈಮಾನಿಕ ದಾಳಿಯಲ್ಲಿ ಕನಿಷ್ಠ 500 ಜನರನ್ನು ಸಾವನ್ನಪ್ಪಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆಯಾಗಿದೆ. ಪ್ರಧಾನಿ ಮೋದಿ ಅವರು ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದರು ಮತ್ತು ಪ್ರದೇಶದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. 

ಇದನ್ನೂ ಓದಿ: ಧೀಡಿರನೇ ಪತಿಯಿಂದ ಬೇರ್ಪಟ್ಟ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ..! ಅಷ್ಟಕ್ಕೂ ಆಗಿದ್ದಾದರೂ ಏನು?

PM ಮೋದಿ ಅವರು ತಮ್ಮ ಅಧಿಕೃತ X ಖಾತೆಯಲ್ಲಿ, “ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ HE ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಗಾಜಾದ ಅಲ್ ಅಹ್ಲಿ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟ ಜನರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪ್ಯಾಲೇಸ್ಟಿನಿಯನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News