ಪ್ರಧಾನಿ ಮೋದಿ ಭಾಷಣದ ವೇಳೆ ವೇದಿಕೆಯಡಿ ಬೆಂಕಿ, ಮುಂದೇನಾಯ್ತು...

ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ಅನಾಹುತ ಸಂಭವಿಸಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಯಾವುದೇ ಅಡ್ಡಿ ಆತಂಕವಿಲ್ಲದೆ ತಮ್ಮ ಭಾಷಣ ಮುಂದುವರೆಸಿದರು ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ಕುಲಹರಿ ತಿಳಿಸಿದ್ದಾರೆ.

Last Updated : Apr 15, 2019, 07:39 AM IST
ಪ್ರಧಾನಿ ಮೋದಿ ಭಾಷಣದ ವೇಳೆ ವೇದಿಕೆಯಡಿ ಬೆಂಕಿ, ಮುಂದೇನಾಯ್ತು... title=

ಆಲಿಘಢ್: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ವೇದಿಕೆಯಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಭಾನುವಾರ ಆಲಿಘಡ್ನಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ಕುಲಹರಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಭಾಷಣದ ವೇಳೆ ಏರ್ ಕಂಡೀಷನಿಂಗ್ ಸರ್ಕ್ಯೂಟ್ ತಂತಿಯ ಉಷ್ಣತೆಯು ವೇದಿಕೆಗೆ ತಾಕಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ. ಅದಾಗ್ಯೂ ಭದ್ರತಾ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದರಿಂದ ಯಾವುದೇ ತೊಂದರೆಯಾಗಲಿಲ್ಲ ಎಂದು ಆಕಾಶ್ ಕುಲಹರಿ ಮಾಹಿತಿ ನೀಡಿದರು.

ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಯಾವುದೇ ಅಡ್ಡಿ ಆತಂಕವಿಲ್ಲದೆ ತಮ್ಮ ಭಾಷಣ ಮುಂದುವರೆಸಿದರು. ವೇದಿಕೆಯಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ನಿರ್ಲಕ್ಷ ವಹಿಸಿದ ಕಾರಣ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
 

Trending News