Earthquake: ಮಿಜೋರಾಂನಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು

Earthquake: ಭಾರತದ ಈಶಾನ್ಯ ರಾಜ್ಯವಾದ ಮಿಜೋರಾಂನಲ್ಲಿ ಇಂದು (ಶುಕ್ರವಾರ) ಮುಂಜಾನೆ ಭೂಕಂಪನದ ಪ್ರಬಲ ಕಂಪನಗಳು ಸಂಭವಿಸಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟಿತ್ತು.

Written by - Zee Kannada News Desk | Last Updated : Nov 26, 2021, 07:14 AM IST
  • ಭಾರತದ ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಇಂದು (ಶುಕ್ರವಾರ) ಮುಂಜಾನೆ ಪ್ರಬಲ ಭೂಕಂಪ
  • ಬಾಂಗ್ಲಾದೇಶದಲ್ಲೂ ಭೂಕಂಪನದ ಅನುಭವ
  • ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3ರಷ್ಟು ದಾಖಲು
Earthquake: ಮಿಜೋರಾಂನಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು title=
Earthquake hits in Mizoram and bangladesh

Earthquake: ಭಾರತದ ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಇಂದು (ಶುಕ್ರವಾರ) ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ.  ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1 ರಷ್ಟು ದಾಖಲಾಗಿದೆ. 

ಮಿಜೋರಾಂ ಹೊರತುಪಡಿಸಿ ಬಾಂಗ್ಲಾದೇಶದಲ್ಲೂ (Bangladesh) ಭೂಕಂಪನದ ಅನುಭವವಾಗಿದೆ. ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3ರಷ್ಟು ದಾಖಲಾಗಿದೆ. ಭೂಕಂಪನ ಸಂಭವಿಸಿದ ತಕ್ಷಣ ಜನರು ಗಾಬರಿಗೊಂಡು ಮನೆಯಿಂದ ಹೊರಬಂದರು ಎಂದು ವರದಿಯಾಗಿದೆ. 

ಇದನ್ನೂ ಓದಿ- ಸಂವಿಧಾನ ದಿನ... ನೇರಪ್ರಸಾರಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ಕೋವಿಂದ್

ಭೂಕಂಪದ (Earthquake) ನಂತರ ಆಡಳಿತವು ಎಚ್ಚೆತ್ತುಕೊಂಡು ಪರಿಹಾರ ಕಾರ್ಯವನ್ನು ಪ್ರಾರಂಭಿಸಿದೆ. ಭೂಕಂಪದ ನಂತರ ಇಲ್ಲಿ ಅವ್ಯವಸ್ಥೆ ಉಂಟಾಗಿದೆ. ಜನರು ಸಂಯಮದಿಂದ ವರ್ತಿಸುವಂತೆ ಮನವಿ ಮಾಡಲಾಗಿದೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ- Air pollution: ಕಟ್ಟಡ ನಿರ್ಮಾಣ ಚಟುವಟಿಕೆ ನಿಷೇಧದಿಂದ ತೊಂದರೆಗೊಳಗಾದ ಕಾರ್ಮಿಕರಿಗೆ ಕೇಜ್ರಿವಾಲ್ ಪರಿಹಾರ ಘೋಷಣೆ

ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದುವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ ಪೂರ್ವಕ್ಕೆ 175 ಮೈಲುಗಳಷ್ಟು ದೂರದಲ್ಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News