ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಹಿನ್ನೆಲೆ : ಆಯೋಗದ ನಡೆ ಪ್ರಶ್ನಿಸಿದ ಪಿ.ಚಿದಂಬರಂ

ಕಾಂಗ್ರೆಸ್ ಮುಖಂಡ ಹಾಗು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ದೂರನ್ನು `ಹತಾಶೆಯ ಮನೋಭಾವ' ಎಂದು ಟೀಕಿಸಿದ್ದಾರೆ. 

Last Updated : Dec 14, 2017, 01:30 PM IST
ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಹಿನ್ನೆಲೆ : ಆಯೋಗದ ನಡೆ ಪ್ರಶ್ನಿಸಿದ   ಪಿ.ಚಿದಂಬರಂ title=

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುದ್ದಿ ವಾಹಿನಿಗಳಲ್ಲಿ ಸಂದರ್ಶನ ನೀಡಿದ್ದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ರಾಹುಲ್ ಗಾಂಧಿಗೆ ಶೋಕಾಸ್ ನೋಟಿಸ್ ನೀಡಿದೆ. 

ಈ ಸಂಬಂಧ ಡಿಸೆಂಬರ್ 18ರೊಳಗೆ ಸ್ಪಷ್ಟನೆ ನೀಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸೂಚಿಸಿದ್ದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ನಿಮ್ಮ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು ಎಂದು ಆಯೋಗ ಪ್ರಶ್ನಿಸಿದೆ. 

ಅಷ್ಟೇ ಅಲ್ಲದೆ, ರಾಹುಲ್ ಗಾಂಧಿ ಸಂದರ್ಶನ ಪ್ರಸಾರ ಮಾಡಿದ ಟಿವಿ ಚಾನೆಲ್ಗಳ ವಿರುದ್ಧವೂ ಎಫ್ಐಆರ್ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ಗುಜರಾತ್ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. 

ಈ ಮಧ್ಯೆ, ಕಾಂಗ್ರೆಸ್ ಮುಖಂಡ ಹಾಗು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಬಿಜೆಪಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ದೂರನ್ನು `ಹತಾಶೆಯ ಮನೋಭಾವ' ಎಂದು ಟೀಕಿಸಿದ್ದಾರೆ. 

"ನಿನ್ನೆ, ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ, ಬಿಜೆಪಿ ಅಧ್ಯಕ್ಷ ಸಂದರ್ಶನವೊಂದನ್ನು ನೀಡಿದ್ದಾರೆ, ರೈಲ್ವೆ ಮಂತ್ರಿ ಸಂದರ್ಶನವೊಂದನ್ನು ನೀಡಿದ್ದಾರೆ, ಆದರೆ ಇವರೆಲ್ಲರೂ ಚುನಾವಣಾ ಆಯೋಗದ ಕಣ್ಣಿನಿಂದ ಹೇಗೆ ತಪ್ಪಿಸಿಕೊಂಡಿದ್ದಾರೆ ? ರಾಹುಲ್ ಗಾಂಧಿ ಅವರನ್ನು ಮಾತ್ರ ತಪ್ಪಿತಸ್ಥರನ್ನಾಗಿ ಏಕೆ ಮಾಡಲಾಗಿದೆ? ಎಂದು ಚಿದಂಬರಂ ಟ್ವೀಟ್ನಲ್ಲಿ ಕೇಳಿದ್ದಾರೆ. 

ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನಲೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ. 

Trending News