Sonia Gandhi : ಸೋನಿಯಾ ಗಾಂಧಿಗೆ ಮತ್ತೆ ಎದುರಾಯಿತು ಸಂಕಷ್ಟ!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.

Written by - Channabasava A Kashinakunti | Last Updated : Jul 11, 2022, 05:52 PM IST
  • ನ್ಯಾಷನಲ್ ಹೆರಾಲ್ಡ್ ಪ್ರಕರಣ
  • ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಇಡಿ ಸಮನ್ಸ್
  • ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.
Sonia Gandhi : ಸೋನಿಯಾ ಗಾಂಧಿಗೆ ಮತ್ತೆ ಎದುರಾಯಿತು ಸಂಕಷ್ಟ! title=

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.

ಜೂನ್‌ನಲ್ಲಿ, ಸಮನ್ಸ್ ಮುಂದೂಡುವಂತೆ ಕೋರಿ ಸೋನಿಯಾ ಗಾಂಧಿ ಇಡಿಗೆ ಲಿಖಿತ ಮನವಿಯನ್ನು ಮಾಡಿದ್ದರು. ಆ ವೇಳೆ ಸೋನಿಯಾಗೆ ಕೋವಿಡ್ -19 ಪಾಸಿಟಿವ್ ಮತ್ತು ಶ್ವಾಸಕೋಶದ ಸೋಂಕಿಗೆ ಗುರಿಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕಾಲಾವಕಾಶ ನೀಡಿ, ವಿಚಾರಣೆ ಮುಂದೂಡುವಂತೆ ಕೋರಿ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದರು.

ಇದನ್ನೂ ಓದಿ : Congress : ಕಾಂಗ್ರೆಸ್‌ಗೆ ಬಿಗ್ ಶಾಕ್ : ಮತ್ತಿಬ್ಬರು ಹಿರಿಯ ನಾಯಕರು ರಾಜೀನಾಮೆ!

ಸೋನಿಯಾ ಗಾಂಧಿ ಜೂನ್ 18 ರಂದು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸಧ್ಯ ಬಿಡುಗಡೆಯಾಗಿ ಮನೆಗೆ ಹೋಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುವಂತೆ ಈ ಹಿಂದೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ನೀಡಿ, ಜೂನ್ 8 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ತಿಳಿಸಿತ್ತು, ಆದರೆ ಜೂನ್ 1 ರಂದು ಅವರಿಗೆ ಕೋವಿಡ್ -19 ಗೆ ಪಾಸಿಟಿವ್ ಬಂದಿತ್ತು. ಹೀಗಾಗಿ ಇಡಿ ಬಳಿ ಸಮಯ ಕೇಳಿದ್ದರು.

ನ್ಯಾಷನಲ್ ಹೆರಾಲ್ಡ್ ಕೇಸ್

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸಾವಿರಾರು ಕೋಟಿ ರೂಪಾಯಿಗಳ ಭೂ ಕಬಳಿಕೆ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ ನಂತರ ನ್ಯಾಷನಲ್ ಹೆರಾಲ್ಡ್ ಪ್ರಕರಣ ಬೆಳಕಿಗೆ ಬಂದಿದೆ.

ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಮತ್ತು ಅಲಹಾಬಾದ್ ಮತ್ತು ಮದ್ರಾಸ್ ಹೈಕೋರ್ಟ್‌ಗಳ ಮಾಜಿ ಮುಖ್ಯ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಸೇರಿದಂತೆ AJL ನ ಅನೇಕ ಷೇರುದಾರರು, YIL ಅದರ ಮೇಲೆ ನಿಯಂತ್ರಣವನ್ನು ಪಡೆದಾಗ ತಮಗೆ ಯಾವುದೇ ನೋಟಿಸ್ ನೀಡಲಾಗಿಲ್ಲ ಎಂದು ಹೇಳಿದರು. 2010ರಲ್ಲಿ ತಮ್ಮ ಅಪ್ಪಂದಿರು ಹೊಂದಿದ್ದ ಷೇರುಗಳನ್ನು ಅವರ ಒಪ್ಪಿಗೆಯಿಲ್ಲದೆ ಎಜೆಎಲ್‌ಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ದೂರಿನಲ್ಲಿ ನ್ಯಾಷನಲ್ ಹೆರಾಲ್ಡ್ ಸೇರಿದಂತೆ AJL ನ ಆಸ್ತಿಯನ್ನು YIL "ದುರುದ್ದೇಶಪೂರಿತ" ರೀತಿಯಲ್ಲಿ ಲಾಭ ಗಳಿಸಲು ಮತ್ತು 2,000 ಕೋಟಿ ಮೌಲ್ಯದ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಅಬ್ಬಬ್ಬಾ... ಒಂದಲ್ಲ, ಎರಡಲ್ಲ ಬರೋಬ್ಬರಿ 27 ಮಂದಿ ಒಂದೇ ಆಟೋದಲ್ಲಿ ಪ್ರಯಾಣ!

ಕಾಂಗ್ರೆಸ್ ಪಕ್ಷಕ್ಕೆ ಎಜೆಎಲ್ ನೀಡಬೇಕಿದ್ದ 90.25 ಕೋಟಿ ರೂ.ಗಳನ್ನು ವಸೂಲಿ ಮಾಡುವ ಹಕ್ಕು ಪಡೆಯಲು ವೈಐಎಲ್ ಕೇವಲ 50 ಲಕ್ಷ ರೂ. ಪಾವತಿಸಿದೆ ಎಂದು ಸ್ವಾಮಿ ಆರೋಪಿಸಿದ್ದಾರೆ. ಎಜೆಎಲ್ ಪತ್ರಿಕೆ ಆರಂಭಿಸಲು ಸಾಲ ಪಡೆದಿತ್ತು. ಪಕ್ಷದ ನಿಧಿಯಿಂದ ಸಾಲ ನೀಡಿದ್ದರಿಂದ ಅಕ್ರಮವಾಗಿದೆ ಎಂದು ಸ್ವಾಮಿ ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಇಡಿ ತನಿಖೆ 2014 ರಲ್ಲಿ ಪ್ರಾರಂಭವಾಯಿತು. ಇದು ಅಕ್ರಮ ಹಣ ವರ್ಗಾವಣೆಯನ್ನು ಪರಿಶೀಲಿಸಲು ತನಿಖೆಯನ್ನು ಪ್ರಾರಂಭಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News