ಬಿಹಾರ: ಲಖಿಸರೈ ರಸ್ತೆ ಅಪಘಾತದಲ್ಲಿ 8 ಮಂದಿ ಮೃತ, ಹಲವರಿಗೆ ಗಾಯ

ಲಖಿಸರೈನಿಂದ ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.

Last Updated : Jul 11, 2019, 09:10 AM IST
ಬಿಹಾರ: ಲಖಿಸರೈ ರಸ್ತೆ ಅಪಘಾತದಲ್ಲಿ 8 ಮಂದಿ ಮೃತ, ಹಲವರಿಗೆ ಗಾಯ title=

ಲಖಿಸರೈ: ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ಪ್ರದೇಶದಲ್ಲಿ  ತಡರಾತ್ರಿ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ, ಕೋಪಗೊಂಡ ಜನರು ಹಲ್ಡಿ ಬಜಾರ್‌ನ ಅಂಬೇಡ್ಕರ್ ಚೌಕ್ ಬಳಿ ರಸ್ತೆ ಅಪಘಾತದಲ್ಲಿ ಹಾನಿಗೊಳಗಾದವರಿಗೆ ಪರಿಹಾರ ಕೋರಿ ರಸ್ತೆ ತಡೆ ನಡೆಸಿದ್ದಾರೆ.

ಅಪಘಾತದ ಬಗ್ಗೆ ತಿಳಿಯುತ್ತಿದ್ದಂತೆ ಎಸ್‌ಪಿ ಮನೀಶ್ ಕುಮಾರ್, ಎಸ್‌ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದರು.

ಹಲ್ಸಿ ಬಜಾರ್‌ನಲ್ಲಿ, ನಕ್ ಮಾಂಜಿಯ ಮೊಮ್ಮಗಳ ವಿವಾಹವಿತ್ತು ಎಂದು ಹೇಳಲಾಗಿದೆ. ಅದಕ್ಕಾಗಿ ಭರಾತ್(ಮೆರವಣಿಗೆ) ಠಾಣಾ ಪ್ರದೇಶದ ಗಧಿವಿಸನ್‌ಪುರ ಗ್ರಾಮದಿಂದ ಬಂದಿತು. ಇಡೀ ಸಮಾರಂಭದಲ್ಲಿ ಸಾಕಷ್ಟು ಸಂತೋಷವಾಯಿತು. ಇದ್ದಕ್ಕಿದ್ದಂತೆ, ಲಖಿಸರೈನಿಂದ ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ, ಬಳಿಕ ವಿವಾಹ ಸಮಾರಂಭದ್ದವರಿಗೆ ಮೃತ್ಯುವಾಗಿ ಪರಿಣಮಿಸಿದೆ.

ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಇದಲ್ಲದೆ, ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಎಂಬುವವರು ಸೇರಿದಂತೆ ಅನೇಕರು ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Trending News