ಮೋದಿ, ಶಾ, ವಿರುದ್ಧದ ದೂರುಗಳಿಗೆ ಚುನಾವಣಾ ಆಯೋಗ ನಿರ್ಲಕ್ಷ್ಯ, ಸುಪ್ರೀಂಗೆ ಕಾಂಗ್ರೆಸ್ ದೂರು

ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ನೀಡಿದ್ದ ದೂರುಗಳಿಗೆ ಚುನಾವಣಾ ಆಯೋಗ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ.ಈಗ ಸುಪ್ರಿಂಗೆ ನೀಡಿರುವ ದೂರಿನಲ್ಲಿ ಚುನಾವಣಾ ಆಯೋಗಕ್ಕೆ ಬಂದಂತಹ ದೂರುಗಳನ್ನು 24 ಗಂಟೆಗಳಲ್ಲಿ ನಿರ್ಧರಿಸುವಂತೆ ನಿರ್ದೇಶನ ನೀಡಲು ಕಾಂಗ್ರೆಸ್ ಸುಪ್ರೀಂಗೆ ಮನವಿ ಮಾಡಿದೆ.

Last Updated : Apr 29, 2019, 12:54 PM IST
ಮೋದಿ, ಶಾ, ವಿರುದ್ಧದ ದೂರುಗಳಿಗೆ ಚುನಾವಣಾ ಆಯೋಗ ನಿರ್ಲಕ್ಷ್ಯ, ಸುಪ್ರೀಂಗೆ ಕಾಂಗ್ರೆಸ್ ದೂರು title=

ನವದೆಹಲಿ: ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ನೀಡಿದ್ದ ದೂರುಗಳಿಗೆ ಚುನಾವಣಾ ಆಯೋಗ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿ ಈಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ.ಈಗ ಸುಪ್ರಿಂಗೆ ನೀಡಿರುವ ದೂರಿನಲ್ಲಿ ಚುನಾವಣಾ ಆಯೋಗಕ್ಕೆ ಬಂದಂತಹ ದೂರುಗಳನ್ನು 24 ಗಂಟೆಗಳಲ್ಲಿ ನಿರ್ಧರಿಸುವಂತೆ ನಿರ್ದೇಶನ ನೀಡಲು ಕಾಂಗ್ರೆಸ್ ಸುಪ್ರೀಂಗೆ ಮನವಿ ಮಾಡಿದೆ.

ಕಾಂಗ್ರೆಸ್ ಪಕ್ಷವು ಮೋದಿ ಮತ್ತು ಅಮಿತ್ ಶಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿ ಮೂರು ವಾರಗಳು ಆಗುತ್ತಾ ಬಂದರೂ ಸಹಿತ ಯಾವುದೇ  ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ಸುಶ್ಮಿತಾ ದೇವ್ ಆರೋಪಿಸಿದ್ದಾರೆ.ಈಗ ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಮಂಗಳವಾರ ಕಾಂಗ್ರೆಸ್ ಪಕ್ಷದ ಅರ್ಜಿಯನ್ನು ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಚುನಾವಣಾ ರ್ಯಾಲಿಗಳಲ್ಲಿ ಮತದಾರರನ್ನು ಧ್ರುವೀಕರಿಸಲು ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ಅವರು ದ್ವೇಷದ ಭಾಷಣವನ್ನು ಮಾಡಿದ್ದಾರೆ.ಚುನಾವಣಾ ನಿಷೇಧದ ಹೊರತಾಗಿಯೂ ಕೂಡ ಪ್ರಚಾರ ಭಾಷಣದಲ್ಲಿ ಸೈನ್ಯದ ಬಗ್ಗೆ ಉಲ್ಲೇಖಿಸಿದ್ದಾರೆ ಎಂದು ಕಾಂಗ್ರೆಸ್ ತನ್ನ ಅರ್ಜಿಯಲ್ಲಿ ಪ್ರಸ್ತಾಪಿಸಿದೆ. ಎಪ್ರಿಲ್ 23 ರಂದು ಗುಜರಾತ್ನಲ್ಲಿ ನಡೆದ ರ್ಯಾಲಿಯೊಂದರಲ್ಲಿ ಪ್ರಧಾನಿ ಮೋದಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

Trending News