ಫೆ.27ಕ್ಕೆ ಕರ್ನಾಟಕದ 4 ಸೇರಿದಂತೆ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ!

Rajya Sabha Election: ಕೇಂದ್ರ ಚುನಾವಣೆ ಆಯೋಗವು ರಾಜ್ಯಸಭಾ ಚುನಾವಣೆಯ ದಿನಾಂಕ ಘೋಷಿಸಿದೆ. ಕರ್ನಾಟಕದ ೪ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.

Written by - Puttaraj K Alur | Last Updated : Jan 29, 2024, 10:04 PM IST
  • ರಾಜ್ಯಸಭಾ ಚುನಾವಣೆಯ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ
  • 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ
  • ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ
ಫೆ.27ಕ್ಕೆ ಕರ್ನಾಟಕದ 4 ಸೇರಿದಂತೆ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ! title=
56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಇದರ ನಡುವೆಯೇ ಕೇಂದ್ರ ಚುನಾವಣೆ ಆಯೋಗವು ರಾಜ್ಯಸಭಾ ಚುನಾವಣೆಯ ದಿನಾಂಕ ಘೋಷಿಸಿದೆ. ಕರ್ನಾಟಕದ ೪ ಸೇರಿದಂತೆ 15 ರಾಜ್ಯಗಳ ಒಟ್ಟು 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.

ಫೆಬ್ರವರಿ 27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಸೋಮವಾರ ಮಾಹಿತಿ ನೀಡಿದೆ. ಉಮೇದುವಾರಿಕೆ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಕರ್ನಾಟಕದ ೪ ಸ್ಥಾನಗಳು ಸೇರಿ ಒಟ್ಟು 15 ರಾಜ್ಯಗಳ 56 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆ.16ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಫೆಬ್ರವರಿ 20 ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿರುತ್ತದೆ. ಮತದಾನ ನಡೆಯುವ ಫೆ.27ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಾತ್ರವಲ್ಲ, ದೇಶದ ಈ ನಗರಗಳಲ್ಲಿಯೂ ಶ್ರೀರಾಮನ ಭವ್ಯವಾದ ದೇವಾಲಯಗಳಿವೆ!

ಯಾವ ರಾಜ್ಯಗಳಲ್ಲಿ ಎಷ್ಟು ಸ್ಥಾನಗಳಿಗೆ ಚುನಾವಣೆ?

ರಾಜ್ಯ ಸ್ಥಾನ
ಕರ್ನಾಟಕ 4
ಆಂಧ್ರಪ್ರದೇಶ 3
ಬಿಹಾರ 6
ಛತ್ತೀಸ್‌ಗಢ 1
ಗುಜರಾತ್ 4
ಹರಿಯಾಣ 1
ಹಿಮಾಚಲ ಪ್ರದೇಶ 1
ಮಧ್ಯಪ್ರದೇಶ 5
ಮಹಾರಾಷ್ಟ್ರ 6
ತೆಲಂಗಾಣ 3
ಉತ್ತರ ಪ್ರದೇಶ 10
ಉತ್ತರಾಖಂಡ 1
ಪಶ್ಚಿಮ ಬಂಗಾಳ 5
ಒಡಿಶಾ 3
ರಾಜಸ್ಥಾನ 3
ಒಟ್ಟು 56

ರಾಜ್ಯಸಭೆಯ ಪಕ್ಷವಾರು ಬಲಾಬಲ 

ರಾಜ್ಯಸಭೆಯ ಒಟ್ಟು 245 ಸ್ಥಾನಗಳ ಪೈಕಿ ಬಿಜೆಪಿಯೇ ಹೆಚ್ಚಿನ ಸದಸ್ಯರನ್ನು ಹೊಂದಿದೆ. ಐವರು ನಾಮನಿರ್ದೇಶಿತ ಸದಸ್ಯರು ಸೇರಿ 94 ಸದಸ್ಯರನ್ನು ಬಿಜೆಪಿ ಹೊಂದಿದೆ. ಇನ್ನು ಕಾಂಗ್ರೆಸ್‌ ಪಕ್ಷವು 30 ಸದಸ್ಯರನ್ನು ಹೊಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯಸಭೆಯ 56 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವುದು ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಇದನ್ನೂ ಓದಿ: ʼಕ್ಷಮಿಸಿ ಅಪ್ಪ-ಅಮ್ಮ ಇದೇ ನನ್ನ ಕೊನೇ ಆಯ್ಕೆʼ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News