ಪುಲ್ವಾಮಾದಲ್ಲಿ ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಎನ್‌ಕೌಂಟರ್, ಇಬ್ಬರು ಉಗ್ರರ ಹತ್ಯೆ

ಪುಲ್ವಾಮಾ ಎನ್‌ಕೌಂಟರ್: ಬುಧವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೊಮ್ಮೆ ಎನ್‌ಕೌಂಟರ್ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.

Written by - Yashaswini V | Last Updated : Apr 28, 2022, 06:44 AM IST
  • ಹತ್ಯೆಯಾದ ಇಬ್ಬರು ಉಗ್ರರನ್ನು ಎಜಾಜ್ ಹಫೀಜ್ ಮತ್ತು ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದೆ ಎಂದು ಐಜಿ ತಿಳಿಸಿದ್ದಾರೆ.
  • ಇಬ್ಬರೂ ಭಯೋತ್ಪಾದಕರು ಅಲ್ ಬದರ್ ಎಂಬ ಭಯೋತ್ಪಾದಕ ಸಂಘಟನೆಯ ಸದಸ್ಯರಾಗಿದ್ದು, ಕಾಶ್ಮೀರದ ನಿವಾಸಿಗಳಾಗಿದ್ದರು.
  • ಈ ಇಬ್ಬರು ಉಗ್ರರಿಂದ 2 ಎಕೆ 47 ರೈಫಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪುಲ್ವಾಮಾದಲ್ಲಿ ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಎನ್‌ಕೌಂಟರ್, ಇಬ್ಬರು ಉಗ್ರರ ಹತ್ಯೆ title=
Pulwama Encounter

ಪುಲ್ವಾಮಾ ಎನ್‌ಕೌಂಟರ್: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುಲ್ವಾಮಾದ ಮಿಟ್ರಿಗಾಮ್ ಪ್ರದೇಶದಲ್ಲಿ ಎನ್‌ಕೌಂಟರ್:
ಪುಲ್ವಾಮಾ ಜಿಲ್ಲೆಯ ಮಿತ್ರಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಒಟ್ಟಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಮನೆ-ಮನೆ ಶೋಧ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಳಿಕ ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ 2 ಉಗ್ರರು ಹತರಾಗಿದ್ದಾರೆ. ಈ ವೇಳೆ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಇದನ್ನೂ ಓದಿ- Cyber Crime : ಸೈಬರ್ ಕ್ರೈಮ್ ತಡೆಗಟ್ಟಗಲು ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!

ರಾತ್ರಿ ಕೆಲಕಾಲ ಕಾರ್ಯಾಚರಣೆ ಸ್ಥಗಿತಗೊಂಡಿತ್ತು:
ಈ ಕುರಿತು ಟ್ವೀಟ್ ಮಾಡಿರುವ ಕಾಶ್ಮೀರ ರೇಂಜ್ ಐಜಿ ವಿಜಯ್ ಕುಮಾರ್, 'ಕೆಲವು ಭಯೋತ್ಪಾದಕ ಸಂಘಟನೆಯ 2-3 ಭಯೋತ್ಪಾದಕರು ಪ್ರದೇಶದಲ್ಲಿ ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಪ್ರದೇಶವನ್ನು ಸುತ್ತುವರೆಯಲಾಯಿತು. ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ನಾಗರಿಕರನ್ನು ಸ್ಥಳಾಂತರಿಸುವ ಸಲುವಾಗಿ ರಾತ್ರಿ ಕೆಲಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬಳಿಕ ಸಿಕ್ಕಿಬಿದ್ದ ಉಗ್ರರ ವಿರುದ್ಧ ಮತ್ತೆ ಕಾರ್ಯಾಚರಣೆ ಆರಂಭಿಸುವ ಮೂಲಕ ಅವರನ್ನು ನಿರ್ಮೂಲನೆ ಮಾಡಲಾಯಿತು ಎಂದಿದ್ದಾರೆ.

ಹತರಾದ ಉಗ್ರರ ಗುರುತು:
ಹತ್ಯೆಯಾದ ಇಬ್ಬರು ಉಗ್ರರನ್ನು ಎಜಾಜ್ ಹಫೀಜ್ ಮತ್ತು ಶಾಹಿದ್ ಅಯೂಬ್ ಎಂದು ಗುರುತಿಸಲಾಗಿದೆ ಎಂದು ಐಜಿ ತಿಳಿಸಿದ್ದಾರೆ. ಇಬ್ಬರೂ ಭಯೋತ್ಪಾದಕರು ಅಲ್ ಬದರ್ ಎಂಬ ಭಯೋತ್ಪಾದಕ ಸಂಘಟನೆಯ ಸದಸ್ಯರಾಗಿದ್ದು, ಕಾಶ್ಮೀರದ ನಿವಾಸಿಗಳಾಗಿದ್ದರು. ಇಬ್ಬರು ಉಗ್ರರಿಂದ 2 ಎಕೆ 47 ರೈಫಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ಕಾಶ್ಮೀರದಲ್ಲಿ ಕಾರ್ಮಿಕರ ಮೇಲಿನ ದಾಳಿಯಲ್ಲಿ ಇಬ್ಬರೂ ಭಯೋತ್ಪಾದಕರು ಭಾಗಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ- ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಮುಂದಾದ ಮಹಾರಾಷ್ಟ್ರ

ಈ ವರ್ಷ ಇದುವರೆಗೆ 41 ಎನ್‌ಕೌಂಟರ್‌ಗಳು ನಡೆದಿವೆ:
ಈ ವರ್ಷದ ಜನವರಿ 1 ರಿಂದ ಇದುವರಗೆ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಒಟ್ಟು 41 ಎನ್‌ಕೌಂಟರ್‌ಗಳನ್ನು ನಡೆಸಿವೆ  ಇದರಲ್ಲಿ 59 ಉಗ್ರರನ್ನು ಹತ್ಯೆ ಮಾಡುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಸುಮಾರು 10 ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News