ಸೋಪೊರಾದಲ್ಲಿ ಎನ್ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಬಾರಾಮುಲ್ಲಾದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ.  

Last Updated : Feb 22, 2019, 11:10 AM IST
ಸೋಪೊರಾದಲ್ಲಿ  ಎನ್ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ  title=
File Image

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸೋಪೊರಾದ ವಾರ್ಪೊರಾ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಎನ್ಕೌಂಟರ್ ನಡೆಯುತ್ತಿದ್ದು ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.

2 ರಿಂದ 3 ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯ ನಡೆಸುತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿದ್ದು ಓರ್ವ ಉಗ್ರನನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮುನ್ನೆಚ್ಚರಿಕಾ ಕ್ರಮವಾಗಿ ಭದ್ರತಾ ಪಡೆ ಈ ಪ್ರದೇಶದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದ್ದು, ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ. ಪ್ರದೇಶದಲ್ಲಿ ಎನ್ಕೌಂಟರ್ ಮುಂದುವರೆದಿದ್ದು, ಸಿಆರ್ಪಿಎಫ್ 172 ಬೆಟಾಲಿಯನ್ಗಳು, 177 ಬೆಟಾಲಿಯನ್ಗಳು ಮತ್ತು 92 ಬೆಟಾಲಿಯನ್ಗಳು, 22 ರಾಜಸ್ಥಾನ, ಸೊಪೋರ್ ಎಸ್ಒಜಿ ಈ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Trending News