ಕೇರಳದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್

ಮಾಜಿ ಇಸ್ರೋ ಅಧ್ಯಕ್ಷ  ಮಾಧವನ್ ನಾಯರ್ ಅವರು ತಿರುವನಂತಪುರದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

Last Updated : Oct 28, 2018, 03:49 PM IST
ಕೇರಳದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್  title=
Photo:ANI

ನವದೆಹಲಿ: ಮಾಜಿ ಇಸ್ರೋ ಅಧ್ಯಕ್ಷ  ಮಾಧವನ್ ನಾಯರ್ ಅವರು ತಿರುವನಂತಪುರದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಶನಿವಾರದಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.ಮಾಧ್ಯಮ ವರದಿಗಳ ಪ್ರಕಾರ, ಮಾಜಿ ಟ್ರಾವಂಕೂರು ದೇವಸ್ವಮ್ ಬೋರ್ಡ್ (ಟಿಡಿಬಿ) ಅಧ್ಯಕ್ಷ ಜಿ ರಾಮನ್ ನಾಯರ್ ಸೇರಿದಂತೆ ನಾಲ್ವರು ಇದೆ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿಯವರ ದೇಶವನ್ನು ಸದೃಡಗೊಳಿಸುವ ಸಂಕಲ್ಪದಲ್ಲಿ ತಾವು ನಂಬಿಕೆಯಿಟ್ಟಿರುವುದರಿಂದ ತಾವು  ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವುದಾಗಿ  ಎಂದು ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ತಿಳಿಸಿದ್ದಾರೆ.

ಕೇರಳಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ  ಶಬರಿಮಲೆ ದೇವಸ್ತಾನಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.ಅಲ್ಲದೆ ಇದೆ ವೇಳೆ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದರು.

 

Trending News