Delhi Deputy CM Manish Sisodia : ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ರಾಷ್ಟ್ರ ರಾಜಧಾನಿ ಮತ್ತು ಇತರ 7 ರಾಜ್ಯಗಳ 21 ಸ್ಥಳಗಳ ಮೇಲೆ ಇಂದು ದಾಳಿ ಮಾಡಿದೆ.
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೂ ತನಿಖಾ ಸಂಸ್ಥೆ ದಾಳಿ ನಡೆಸಿ, ಅವರ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿದೆ. ಪ್ರಕರಣದಲ್ಲಿ ಸಿಬಿಐ 15 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದೆ. ಮನೀಶ್ ಸಿಸೋಡಿಯಾ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡಲಾಗಿದೆ. ಪಿಸಿ ಆಕ್ಟ್ 1988, 120 ಬಿ, 477 ಎ ಅಡಿಯಲ್ಲಿ ಸಿಬಿಐ ಪ್ರಕರಣ ದಾಖಲಿಸಿದೆ.
ಇದನ್ನೂ ಓದಿ : Congress : ರಾಹುಲ್ ಗಾಂಧಿ ಕಚೇರಿ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೈವಾಡ!
ದಾಳಿಯ ವೇಳೆ ಮನೀಶ್ ಸಿಸೋಡಿಯಾ ಅವರ ನಿವಾಸದಿಂದ ದೋಷಾರೋಪಣೆಯ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕ ಸಾಕ್ಷಿಯ ಸಮ್ಮುಖದಲ್ಲಿ ಸಿಬಿಐ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಭವಿಷ್ಯದಲ್ಲಿ ಯಾವುದೇ ವಿವಾದವನ್ನು ತಪ್ಪಿಸಲು ಕಾನೂನು ಪ್ರಕ್ರಿಯೆಯೊಂದಿಗೆ ಇದನ್ನು ಮಾಡಲಾಗಿದೆ ಎಂದು ಮೂಲವೊಂದು ತಿಳಿಸಿದೆ. ಇದಲ್ಲದೆ ತನಿಖೆ ಮುಂದುವರೆದಿದೆ ಮತ್ತು ಸಿಸೋಡಿಯಾ ಅವರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ.
ಸಿಬಿಐ ತಂಡಗಳು ಮಾಜಿ ಅಬಕಾರಿ ಆಯುಕ್ತ ಇ.ಗೋಪಿಕೃಷ್ಣ, ನಾಲ್ವರು ಸಾರ್ವಜನಿಕ ಸೇವಕರು ಮತ್ತು ಇತರರ ಮನೆ ಮೇಲೂ ದಾಳಿ ನಡೆಸಿವೆ. ದಾಳಿಯ ಹಿಂದಿನ ದಿನ, ಸಿಸೋಡಿಯಾ ಅವರು ನಿರಪರಾಧಿ ಮತ್ತು ಸಿಬಿಐ ಕೇಂದ್ರದ ಆಜ್ಞೆಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದರು.
ಸಿಬಿಐ ದಾಳಿ ಬಗ್ಗೆ ಮನೀಶ್ ಸಿಸೋಡಿಯಾ ಹೇಳಿದ್ದೇನು?
ಇಂದು ಮನೀಶ್ ಸಿಸೋಡಿಯಾ ಅವರು ತಮ್ಮ ಮನೆಯಲ್ಲಿ ಸಿಬಿಐ ದಾಳಿಯನ್ನು "ದುರದೃಷ್ಟಕರ" ಎಂದು ಬಣ್ಣಿಸಿದ್ದಾರೆ ಮತ್ತು ದೇಶಕ್ಕಾಗಿ ಒಳ್ಳೆಯ ಕೆಲಸ ಮಾಡುವವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಸಿಬಿಐ ಅಧಿಕಾರಿಗಳನ್ನು ಸ್ವಾಗತಿಸಿದ ಸಿಸೋಡಿಯಾ, ತನಿಖಾ ಸಂಸ್ಥೆಗೆ ಪ್ರತಿ ಹಂತದಲ್ಲೂ ಸಹಕಾರ ನೀಡುವುದಾಗಿ ತಿಳಿಸಿದ್ದು, ಶೀಘ್ರದಲ್ಲೇ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಸಿಸೋಡಿಯಾ ಹೆಸರು, ಅದಕ್ಕೆ ಸಿಬಿಐ ದಾಳಿ ಗಿಫ್ಟ್!
‘‘ನನ್ನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಇಲ್ಲಿಯವರೆಗೆ ಯಾವುದೂ ಸಾಬೀತಾಗಿಲ್ಲ. ಈ ವೇಳೆ ಕೂಡ ಏನೂ ಆಗುವುದಿಲ್ಲ. ನನ್ನ ಉತ್ತಮ ಶಿಕ್ಷಣದ ಕೆಲಸವನ್ನು ನಿಲ್ಲಿಸುವುದಿಲ್ಲ. ದೆಹಲಿಯಲ್ಲಿ ಶಿಕ್ಷಣ ಮತ್ತು ಆರೋಗ್ಯದ ಅದ್ಭುತ ಕೆಲಸದಿಂದ ನಿರಾಶೆಯಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ. ಅದಕ್ಕಾಗಿಯೇ ಅವರು ದೆಹಲಿಯ ಆರೋಗ್ಯ ಮತ್ತು ಶಿಕ್ಷಣ ಸಚಿವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ, ಇದರಿಂದ ಒಳ್ಳೆಯ ಕೆಲಸಗಳನ್ನು ನಿಲ್ಲಿಸಬಹುದು. ನಮ್ಮಿಬ್ಬರ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ, ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.