ಕೇರಳದಲ್ಲಿ ಭಾರೀ ಮಳೆ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ರಾಜ್ಯದ ಇಡುಕಿ ಮತ್ತು ಮಲ್ಲಾಪುರಂ ಜಿಲ್ಲೆಗಳಲ್ಲಿ ಜುಲೈ 18, 19 ಮತ್ತು 20 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. 

Last Updated : Jul 17, 2019, 08:09 AM IST
ಕೇರಳದಲ್ಲಿ ಭಾರೀ ಮಳೆ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ title=

ತಿರುವನಂತಪುರಂ: ಕೇರಳದಲ್ಲಿ ಜುಲೈ 18ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ರಾಜ್ಯ ಹವಾಮಾನ ಇಲಾಖೆ, ಕೇರಳದ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. 

ರಾಜ್ಯದ ಇಡುಕಿ ಮತ್ತು ಮಲ್ಲಾಪುರಂ ಜಿಲ್ಲೆಗಳಲ್ಲಿ ಜುಲೈ 18, 19 ಮತ್ತು 20 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ವಯನಾಡ್ ಮತ್ತು ಕಣ್ಣೂರಿನಲ್ಲಿ ಜುಲೈ 19ರಂದು, ಎರ್ನಾಕುಲಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಜುಲೈ 20ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮೂಲಗಳ ಪ್ರಕಾರ, ಈ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 204 ಮಿ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕೇರಳದ ಮಲಬಾರ್ ಕರಾವಳಿಯ ಸಮುದ್ರ ತೀರದಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿ ತಿಳಿಸಿದೆ.

ಇದೇ ವೇಳೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಮ್ಮ ಫೇಸ್ಬುಕ್ ಪೋಸ್ಟ್ ನಲ್ಲಿ ಜನತೆಗೆ ತಿಳಿಸಿದ್ದಾರೆ. "ಪ್ರವಾಹ ಮತ್ತು ಭೂಕುಸಿತದ ಸಾಧ್ಯತೆಗಳು ಇರುವುದರಿಂದ, ಜನರು ಅತ್ಯಂತ ಜಾಗರೂಕರಾಗಿರಲು ಮತ್ತು ತಮ್ಮನ್ನು ರಕ್ಷಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮನವಿ" ಎಂದು ಸಿಎಂ ತಿಳಿಸಿದ್ದಾರೆ.

Trending News