Fact Check: 2023ರ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಇದರ ಬೆನ್ನಲ್ಲೇ ರಾಜಸ್ಥಾನದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ರೇಸ್ ನಲ್ಲಿ ವಸುಂಧರಾ ರಾಜೇ, ರಾಜ್ಯವರ್ಧನ್ ಸಿಂಗ್ ರಾಥೋಡ್, ದಿಯಾ ಕುಮಾರಿ ಮತ್ತು ಮಹಂತ್ ಬಾಲಕನಾಥ್ ಅವರ ಹೆಸರುಗಳು ಭಾರೀ ಚರ್ಚೆಯಾಗುತ್ತಿವೆ. ಏತನ್ಮಧ್ಯೆ, ಸೋಷಿಯಲ್ ಮೀಡಿಯಾದಲ್ಲಿ ಪತ್ರವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಮಹಾಂತ್ ಬಾಲಕನಾಥ್ ಅವರನ್ನು ಬಿಜೆಪಿ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಈ ವೈರಲ್ ಲೆಟರ್ ಬಗ್ಗೆ ಬಿಜೆಪಿ ಹೇಳಿದ್ದೇನು ಗೊತ್ತಾ?
ವೈರಲ್ ಪತ್ರದಲ್ಲಿ ಏನಿದೆ?
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೈರಲ್ ಪತ್ರದಲ್ಲಿ, ಬಿಜೆಪಿ ಮಹಾಂತ್ ಬಾಲಕನಾಥ್ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ನೇಮಿಸಿದೆ. ಇದರೊಂದಿಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಸವಾಯಿ ಮಾಧೋಪುರ ಶಾಸಕ ಕಿರೋರಿ ಲಾಲ್ ಮೀನಾ ಮತ್ತು ರಾಜಸಮಂದ್ ಶಾಸಕಿ ದಿಯಾ ಕುಮಾರಿ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- Revanth Reddy: ತೆಲಂಗಾಣದ ನೂತನ ಸಿಎಂ ರೇವಂತ್ ರೆಡ್ಡಿ ರಾಜಕೀಯ ಪಯಣ ಹೀಗಿದೆ
ಈ ವೈರಲ್ ಪತ್ರದ ಬಗ್ಗೆ ರಾಜಸ್ಥಾನ ಬಿಜೆಪಿ ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದು, ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ಸಂಪೂರ್ಣ ನಕಲಿ ಎಂದು ಸ್ಪಷ್ಟಪಡಿಸಿದೆ.
Fake Alert ! pic.twitter.com/GABYXWHveO
— BJP Rajasthan (@BJP4Rajasthan) December 6, 2023
ಈ ಕುರಿತಂತೆ BJP4Rajasthan ತನ್ನ ಅಧಿಕೃತ ಟ್ವಿಟ್ಟರ್ (ಈಗಿನ ಎಕ್ಸ್) ಮೂಲಕ "ನಕಲಿ ಎಚ್ಚರಿಕೆ!" ಎಂಬ ಶೀರ್ಷಿಕೆಯೊಂದಿಗೆ ಪ್ರತಿಕ್ರಿಯಿಸಿದ್ದು ಇದರೊಂದಿಗೆ ವೈರಲ್ ಪತ್ರದ ಪ್ರತಿಯ ಮೇಲೆ FAKE ಎಂದು ಬರೆಯಲಾಗಿರುವ ಫೋಟೋವನ್ನು ಸಹ ಶೇರ್ ಮಾಡಿದೆ.
ಇದನ್ನೂ ಓದಿ- ಮಾಜಿ ಐಪಿಎಸ್ ಅಧಿಕಾರಿ ಲಾಲ್ದುಹೋಮ ಮಿಜೋರಾಂನ ನೂತನ ಮುಖ್ಯಮಂತ್ರಿ
ಡಿಸೆಂಬರ್ 03, 2023ರಂದು ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ರಾಜ್ಯದಲ್ಲಿ ಬಿಜೆಪಿ ಭಾರೀ ಅಂತರದಿಂದ ಕಾಂಗ್ರೆಸ್ ಅನ್ನು ಸೋಲಿಸಿದೆ. ಬಿಜೆಪಿ 115 ಮತ್ತು ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದಿವೆ. ಇತರ ಪಕ್ಷಗಳಾದ ಭಾರತ್ ಆದಿವಾಸಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಕ್ರಮವಾಗಿ 3 ಮತ್ತು 2 ಸ್ಥಾನಗಳನ್ನು ಗೆದ್ದಿವೆ.
ಇನ್ನೂ ಮುಖ್ಯಮಂತ್ರಿ ಹೆಸರು ಘೋಷಿಸದ ಬಿಜೆಪಿ:
ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತಗಳಿಸಿರುವ ಬಿಜೆಪಿ ಇನ್ನೂ ಕೂಡ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ರಾಜಸ್ಥಾನದ ಸಿಎಂ ಅಭ್ಯರ್ಥಿಯನ್ನು ನಿರ್ಧರಿಸಲು ನಿರಂತರ ಸಭೆಗಳು ನಡೆಯುತ್ತಿವೆ. ಬುಧವಾರವೂ ಸಹ ದಿಯಾ ಕುಮಾರ್, ರಾಜ್ಯವರ್ಧನ್ ಸಿಂಗ್ ರಾಥೋಡ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿದ್ದರು. ವಸುಂಧರಾ ರಾಜೇ ಅವರನ್ನೂ ಪಕ್ಷವು ದೆಹಲಿಗೆ ಕರೆಸಿಕೊಂಡಿದೆ ಎಂಬ ಬಗ್ಗೆಯೂ ವರದಿಯಾಗಿದೆ. ಒಟ್ಟಿನಲ್ಲಿ ರಾಜಸ್ಥಾನದಲ್ಲಿ ಯಾರು ಸಿಎಂ ಪಟ್ಟವನ್ನು ಅಲಂಕರಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.